ರೈನಾ ಅವರನ್ನು ಗುತ್ತಿಗೆ ಪಟ್ಟಿಯಿಂದ ಹೊರಗಿಟ್ಟಿದ್ದು, ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದ್ದಲ್ಲದೇ, ಸಾಮಾಜಿಕ ತಾಣಗಳಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿತ್ತು.
ನವದೆಹಲಿ(ಮಾ.23): ಕ್ರಿಕೆಟ್ ನಿರ್ಲಕ್ಷ್ಯಿಸಿ ಉದ್ಯಮದತ್ತ ಹೆಚ್ಚಿನ ಗಮನ ನೀಡುತ್ತಿರುವುದರಿಂದಲೇ ಸುರೇಶ್ ರೈನಾ ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಬಿದ್ದಿದ್ದಾರೆ ಎಂದು ಉತ್ತರ ಪ್ರದೇಶ ಕ್ರಿಕೆಟ್'ನ ಮಾಜಿ ಕೋಚ್ ಒಬ್ಬರು ಅಭಿಪ್ರಾಯಪಟ್ಟಿದ್ದಾರೆ.
‘‘2015ರಲ್ಲಿ ಮದುವೆಯಾದ ಬಳಿಕ ರೈನಾಗೆ ಕ್ರಿಕೆಟ್ ಮೇಲೆ ಆಸಕ್ತಿ ಕಡಿಮೆಯಾಗಿದೆ. ನಾನು ಗಮನಿಸಿದಂತೆ ಅವರು ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವುದಕ್ಕಿಂತ ಉದ್ಯಮದತ್ತ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಉತ್ತರ ಪ್ರದೇಶ ಪರ ಕಳೆದ ಋತುವಿನಲ್ಲಿ ಕೇವಲ 3 ರಣಜಿ ಪಂದ್ಯವನ್ನಷ್ಟೇ ಆಡಿದರು. ಸಯ್ಯದ್ ಮುಷ್ತಾಕ್ ಅಲಿ ಹಾಗೂ ವಿಜಯ್ ಹಜಾರೆ ಟೂರ್ನಿಗಳಲ್ಲಿ ಅವರು ಭಾಗವಹಿಸಲೇ ಇಲ್ಲ’’ ಎಂದು ಅವರು ಹೇಳಿದ್ದಾರೆ.
ಹಲವು ವರ್ಷಗಳ ಕಾಲ ಭಾರತ ಸೀಮಿತ ಓವರ್ ತಂಡದಲ್ಲಿ ಪ್ರಮುಖ ಸದಸ್ಯರಾಗಿದ್ದ ರೈನಾ ಭಾರತ ಪರ 223 ಏಕದಿನ ಹಾಗೂ 65 ಟಿ20 ಪಂದ್ಯಗಳನ್ನು ಆಡಿದ್ದಾರೆ.
ರೈನಾ ಅವರನ್ನು ಗುತ್ತಿಗೆ ಪಟ್ಟಿಯಿಂದ ಹೊರಗಿಟ್ಟಿದ್ದು, ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದ್ದಲ್ಲದೇ, ಸಾಮಾಜಿಕ ತಾಣಗಳಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿತ್ತು.
