ಕೆಪಿಎಲ್ ಫೈನಲ್ ಪಂದ್ಯಕ್ಕೆ ಪ್ರವೇಶ ಉಚಿತ

ಹುಬ್ಬಳ್ಳಿ(ಸೆ.22): ಶನಿವಾರ ಸೆ.23 ರಂದು ಸಂಜೆ 7 ಗಂಟೆಗೆ ನಡೆಯುವ ಕರ್ನಾಟಕ ಪ್ರೀಮಿಯರ್ ಲೀಗ್'ನ 6ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇಲ್ಲಿನ ರಾಜನಗರ ಕ್ರೀಡಾಂಗಣದ ಗೇಟ್ ನಂ 3 ಮತ್ತು ನಾಲ್ಕರಲ್ಲಿ ಸಾರ್ವಜನಿಕರಿಗೆ ಪ್ರವೇಶ ಉಚಿತವಿರುತ್ತದೆ. ಪಂದ್ಯ ರಾತ್ರಿ 7 ಗಂಟೆಗೆ ಆರಂಭಗೊಳ್ಳಲಿದೆ.