ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದು ದಾಖಲೆ ಬರೆದ ರಾಫೆಲ್ ನಡಾಲ್

French Open 2018 Rafael Nadal beats Dominic Thiem in men's final
Highlights

ಫ್ರೆಂಚ್ ಓಪನ್ ಟೂರ್ನಿಯಲ್ಲಿ ರಾಫೆಲ್ ನಡಾಲ್ ದಾಖಲೆ ಬರೆದಿದ್ದಾರೆ. ಆಸ್ಟ್ರೀಯಾದ ಡೋಮಿನಿಕ್ ಥೀಮ್ ವಿರುದ್ಧ ಗೆಲುವು ಸಾಧಿಸಿದ ನಡಾಲ್, 11ನೇ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದು ದಾಖಲೆ ಬರೆದರು.

ಪ್ಯಾರಿಸ್(ಜೂನ್.10): ಪ್ರತಿಷ್ಠಿತ ಫ್ರೆಂಚ್ ಓಪನ್ ಟೂರ್ನಿಯಲ್ಲಿ ಸ್ಪೇನ್‌ನ ರಾಫೆಲ್ ನಡಾಲ್ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ರೋಲ್ಯಾಂಡ್ ಗ್ಯಾರೋಸ್‌ನಲ್ಲಿ ನಡೆದ ಪುರುಷರ ಫೈನಲ್ ಪಂದ್ಯದಲ್ಲಿ ಆಸ್ಟ್ರಿಯಾದ ಡೋಮಿನಿಕ್ ಥೀಮ್ ವಿರುದ್ಧ ಹೋರಾಟ ನಡೆಸಿದ ನಡಾಲ್ 6-4,6-3 ಹಾಗೂ 6-2 ಅಂತರದಲ್ಲಿ ಗೆಲುವು ಸಾಧಿಸಿದರು.

ಡೋಮಿನಿಕ್ ಥೀವ್ ವಿರುದ್ಧ ಗೆಲುವು ಸಾಧಿಸಿದ ನಡಾಲ್ 11ನೇ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದು ದಾಖಲೆ ಬರೆದರು. ಇಷ್ಟೇ ಅಲ್ಲ 17ನೇ ಗ್ರ್ಯಾಂಡ್ ಸ್ಲಾಂ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು. ಗ್ರ್ಯಾಂಡ್ ಸ್ಲಾಂ ಟೂರ್ನಿಯ 24ನೇ ಫೈನಲ್ ಪಂದ್ಯದಲ್ಲಿ ನಡಾಲ್ ಗೆಲುವಿನ ನಗೆ ಬೀರಿದ್ದಾರೆ.  ಫ್ರೆಂಚ್ ಓಪನ್ ಗ್ರ್ಯಾಂಡ್ ಸ್ಲಾಂ ಟೂರ್ನಿಯಲ್ಲಿ ನಡಾಲ್ ಓಟ್ಟು 86ನೇ ಗೆಲುವು ಸಾಧಿಸಿದರು.
 

loader