ನವದೆಹಲಿ(ಸೆ.28): ಎರಡು ವರ್ಷಗಳ ಬಳಿಕ ಟೀಮ್​​ ಇಂಡಿಯಾಗೆ ಗೌತಮ್​​ ಗಂಭೀರ್​​ ಕಮ್ ​ಬ್ಯಾಕ್​ ಮಾಡಿದ್ದಾರೆ. 

ಐತಿಹಾಸಿಕ 500ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ಆರಂಭಿಕ ಕೆಎಲ್ ರಾಹುಲ್ ಮುಂದಿನ ಎರಡು ಟೆಸ್ಟ್​​ಗಳಿಗೂ ಅಲಭ್ಯರಾಗಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ರಾಹುಲ್ ಬದಲಿಗೆ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತೀಚಿಗೆ ನಡೆದ ದುಲೀಪ್‌ ಟ್ರೋಫಿ ಟೂರ್ನಿಯಲ್ಲಿ ಗಂಭೀರ್ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಬಿಸಿಸಿಐ ಆಯ್ಕೆದಾರರು ಗಂಭೀರ್ ಅವರನ್ನು ಆಯ್ಕೆ ಮಾಡಿದ್ದಾರೆ. 

ಇನ್ನು ಗಂಭೀರ್‌ ಎರಡು ವರ್ಷಗಳ ಬಳಿಕ ಟೆಸ್ಟ್‌ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. 2014ರಲ್ಲಿ ಇಂಗ್ಲೆಂಡ್‌ವಿರುದ್ಧ ಕೊನೆಯ ಪಂದ್ಯವಾಡಿದ್ದರು. ಇನ್ನು ವೇಗಿ ಇಶಾಂತ್ ಶರ್ಮಾ ಬದಲಾಗಿ ಆಫ್‌ ಸ್ಪಿನ್ನರ್‌ ಜಯಂತ್‌ ಯಾದವ್‌ ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ.