ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ನುಡಿಸುವ ಕುರಿತು ಪರ, ವಿರೋಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಟೀಂ ಇಂಡಿಯಾದ ಆರಂಭಿಕ ದಾಂಡಿಗ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.
ನವದೆಹಲಿ(ಅ.28): ಚಲನಚಿತ್ರ ಪ್ರಾರಂಭಕ್ಕೂ ಮುನ್ನಾ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ನುಡಿಸುವುದಕ್ಕೆ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ನುಡಿಸುವ ಕುರಿತು ಪರ, ವಿರೋಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಟೀಂ ಇಂಡಿಯಾದ ಆರಂಭಿಕ ದಾಂಡಿಗ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಗೌತಿ, ‘ಕ್ಲಬ್'ಗಳ ಹೊರಗೆ 20 ನಿಮಿಷ ಕಾಯುವಿರಿ, ರೆಸ್ಟೋರೆಂಟ್'ಗಳ ಹೊರಭಾಗದಲ್ಲಿ 30 ನಿಮಿಷ ಕಾಯುವಿರಿ. ಹೀಗಿರುವಾಗ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು 52 ಸೆಕೆಂಡ್'ಗಳ ಕಾಲ ಎದ್ದು ನಿಲ್ಲುವುದು ನಿಮಗೆ ಕಷ್ಟವೇ?’ ಎಂದು ಪ್ರಶ್ನಿಸಿದ್ದಾರೆ.