ವೇಗದ ಬೌಲರ್ ಮಕಾಯ್ ಎಂಟಿನಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾರತದ ಸಾಕಷ್ಟು ಜನಗಳಿಗೆ ಅವರು ನಿತಿನ್ ಆಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು(ಜು.06): ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಮಕಾಯ್ ಎಂಟಿನಿ ಇಂದು 40ನೇ ವಸಂತಕ್ಕೆ ಕಾಲಿರಿಸಿದ್ದಾರೆ.
ದಕ್ಷಿಣ ಆಫ್ರಿಕಾ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ ಮೊದಲ ಕಪ್ಪುವರ್ಣೀಯ ಆಟಗಾರ ಎನ್ನುವ ಶ್ರೇಯಕ್ಕೆ ಪಾತ್ರವಾಗಿರುವ ಎಂಟಿನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟುಹಬ್ಬದ ಶುಭಾಶಯಗಳು ಹರಿದು ಬರುತ್ತಿವೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ದಕ್ಷಿಣ ಆಫ್ರಿಕಾದ ವೇಗಿಗೆ ಮತ್ತೊಮ್ಮೆ ವಿನೂತನವಾಗಿ ಶುಭಕೋರಿದ್ದಾರೆ.
ವೇಗದ ಬೌಲರ್ ಮಕಾಯ್ ಎಂಟಿನಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾರತದ ಸಾಕಷ್ಟು ಜನಗಳಿಗೆ ಅವರು ನಿತಿನ್ ಆಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಟೆಸ್ಟ್ ಕ್ರಿಕೆಟ್'ನಲ್ಲಿ 300 ವಿಕೆಟ್ ಪಡೆದ ಮೂರನೇ ಬೌಲರ್ ಎನ್ನುವ ದಾಖಲೆ ಬರೆದಿದ್ದ ಎಂಟಿನಿ, 2010ರ ಇಂಡಿಯನ್ ಪ್ರೀಮಿಯರ್ ಲೀಗ್'ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸಿದ್ದರು.
