ಸ್ಮೃತಿ ಮಂಧನಾಗೆ 23ನೇ ಹುಟ್ಟು ಹಬ್ಬದ ಸಂಭ್ರಮ
ಮುಂಬೈ ಮೂಲದ ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಇಂದು 23ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಬೆಂಗಳೂರು[ಜು.18]: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಬಿಕ ಆಟಗಾರ್ತಿ ಸ್ಮೃತಿ ಮಂಧನಾ ಇಂದು[ಜುಲೈ 18] 23ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಮುಂಬೈನಲ್ಲಿ 1996ರಲ್ಲಿ ಜನಿಸಿದ ಮಂಧನಾ, ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್‌ವುಮೆನ್ ಆಗಿ ಹೊರಹೊಮ್ಮಿದ್ದಾರೆ.
ವಿಸ್ಡನ್ ಗೌರವ: ವಿರಾಟ್, ಮಂಧನಾ ಮುಡಿಗೆ ಮತ್ತೊಂದು ಗರಿ
ಪ್ರಸ್ತುತ ಕಾಲಘಟ್ಟದ ಅತ್ಯುತ್ತಮ ಎಡಗೈ ಬ್ಯಾಟ್ಸ್‌ವುಮೆನ್ ಎನಿಸಿಕೊಂಡಿರುವ ಮಂಧನಾ, ಹಾಲಿ ಐಸಿಸಿ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿದ್ದಾರೆ. ಇನ್ನು ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಟ್ರಯಲ್‌ಬ್ಲೇಜರ್ಸ್ ತಂಡದ ನಾಯಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
2018ರ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 178 ರನ್ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಅಲ್ಲದೇ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 3 ಪಟ್ಟಿಯೊಳಗೆ ಸ್ಥಾನ ಪಡೆಯಲು ಸಫಲವಾಗಿದ್ದರು. ಇದಾದ ಬಳಿಕ ಮಂಧನಾ ಹಿಂತಿರುಗಿ ನೋಡಲೇ ಇಲ್ಲ. ಕ್ರಿಕೆಟ್ ರಂಗದಲ್ಲಿ ತೋರಿದ ಅದ್ಭುತ ಪ್ರದರ್ಶನಕ್ಕಾಗಿ ಮಂಧನಾ ಕೆಲ ದಿನಗಳ ಹಿಂದಷ್ಟೇ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಮಂಧನಾ ಹುಟ್ಟುಹಬ್ಬಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.