30ನೇ ವರ್ಷದ ಹುಟ್ಟ ಹಬ್ಬ ಆಚರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ದಿಗ್ಗಜ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ.
ಡೆಹ್ರಾಡೂನ್(ನ.05): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
ಉತ್ತರಾಖಂಡದ ಹರಿದ್ವಾರದಲ್ಲಿ ವಿರಾಟ್ ಕೊಹ್ಲಿ 30ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಕ್ರಿಕೆಟ್‌ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ವಿರಾಟ್ ಕೊಹ್ಲಿ ಹುಟ್ಟು ಹಬ್ಬ ದಿಗ್ಗಜ ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ. ಇಲ್ಲಿದೆ ಟ್ವೀಟ್ ಶುಭಾಶಯ.
