24 ವರ್ಷದ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಇದುವರೆಗೆ ಆಡಿರುವ ವಿವಿಧ ಮಾದರಿಯ 33 ಪಂದ್ಯಗಳಲ್ಲಿ 30 ಬಾರಿ ತಂಡವನ್ನು ಪ್ರತಿನಿಧಿಸಿದ್ದಾರೆ. ಸೀಮಿತ ಓವರ್'ಗಳ ಕ್ರಿಕೆಟ್'ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಪಾಂಡ್ಯ, ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸುವಲ್ಲಿ ಯುವ ಆಲ್ರೌಂಡರ್ ಪ್ರಮುಖ ಪಾತ್ರ ವಹಿಸಿದ್ದರು.
ಮುಂಬೈ(ನ.11): ಇದೇ ನ.16 ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ.
ಮೊದಲ ಎರಡು ಟೆಸ್ಟ್ ಪಂದ್ಯಗಳಿಗಾಗಿ ಈಗಾಗಲೇ 16 ಆಟಗಾರರ ತಂಡವನ್ನು ಪ್ರಕಟಿಸಲಾಗಿತ್ತು. ಹಾರ್ದಿಕ್'ಗೆ ವಿಶ್ರಾಂತಿ ನೀಡಿದ್ದರಿಂದ ಇದೀಗ 15 ಆಟಗಾರರ ಭಾರತ ತಂಡ ಲಂಕಾ ವಿರುದ್ಧ ಸೆಣಸಲಿದೆ.
ಸತತ ಸರಣಿಗಳಿಂದಾಗಿ ಬಸವಳಿದಿರುವ ಹಾರ್ದಿಕ್'ಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಶುಕ್ರವಾರ ಸ್ಪಷ್ಟಪಡಿಸಿದೆ. ಹಾರ್ದಿಕ್, ವರ್ಷದ ಆರಂಭದಲ್ಲಿ ಲಂಕಾ ವಿರುದ್ಧ ಟೆಸ್ಟ್'ಗೆ ಪದಾರ್ಪಣೆ ಮಾಡಿದ್ದರು.
24 ವರ್ಷದ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಇದುವರೆಗೆ ಆಡಿರುವ ವಿವಿಧ ಮಾದರಿಯ 33 ಪಂದ್ಯಗಳಲ್ಲಿ 30 ಬಾರಿ ತಂಡವನ್ನು ಪ್ರತಿನಿಧಿಸಿದ್ದಾರೆ. ಸೀಮಿತ ಓವರ್'ಗಳ ಕ್ರಿಕೆಟ್'ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಪಾಂಡ್ಯ, ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸುವಲ್ಲಿ ಯುವ ಆಲ್ರೌಂಡರ್ ಪ್ರಮುಖ ಪಾತ್ರ ವಹಿಸಿದ್ದರು.
ಲಂಕಾ ಸರಣಿಗೆ ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ಕೆ.ಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ(ಉಪ ನಾಯಕ), ರೋಹಿತ್ ಶರ್ಮಾ, ವೃದ್ದಿಮಾನ್ ಸಾಹಾ(ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ.