ಬೌಲಿಂಗ್'ನಲ್ಲಿ ಗಮನಾರ್ಹ ಪ್ರದರ್ಶನ ತೋರಿದ ಭಾರತದ ಅನುಭವಿ ಆಟಗಾರ್ತಿ ಜೂಲನ್ ಗೋಸ್ವಾಮಿ ನಾಲ್ಕು ಸ್ಥಾನಗಳ ಏರಿಕೆ ಕಂಡು ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ಲಂಡನ್(ಜು.25): ವನಿತಾ ವಿಶ್ವಕಪ್‌'ನಲ್ಲಿ ಅತ್ಯಮೋಘ ಪ್ರದರ್ಶನ ನೀಡಿದ ಭಾರತದ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್, ಐಸಿಸಿ ಮಹಿಳಾ ಆಟಗಾರ್ತಿಯರ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್‌'ನಲ್ಲಿ 171 ರನ್ ಸಿಡಿಸಿದ್ದ ಹರ್ಮನ್‌ಪ್ರೀತ್, ಫೈನಲ್‌ ಪಂದ್ಯದಲ್ಲೂ ಕೂಡಾ 51 ರನ್ ಬಾರಿಸಿ ಮಿಂಚಿದ್ದರು. ಹೀಗಾಗಿ ಕೌರ್, 7 ಸ್ಥಾನಗಳ ಬಡ್ತಿ ಪಡೆದು ಸದ್ಯ 6ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇನ್ನು ಟೀಂ ಇಂಡಿಯಾ ವನಿತೆಯರ ತಂಡದ ನಾಯಕಿ ಮಿಥಾಲಿ ರಾಜ್ 2ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇನ್ನು ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅಗ್ರಸ್ಥಾನದಲ್ಲಿದ್ದರೆ, ಮತ್ತೋರ್ವ ಆಸೀಸ್ ಆಟಗಾರ್ತಿ ಎಲಿಸಾ ಫೆರ್ರಿ ಮೂರನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಬೌಲಿಂಗ್'ನಲ್ಲಿ ಗಮನಾರ್ಹ ಪ್ರದರ್ಶನ ತೋರಿದ ಭಾರತದ ಅನುಭವಿ ಆಟಗಾರ್ತಿ ಜೂಲನ್ ಗೋಸ್ವಾಮಿ ನಾಲ್ಕು ಸ್ಥಾನಗಳ ಏರಿಕೆ ಕಂಡು ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.