ಹರ್ಯಾಣದ ರೇವಾರಿಯಲ್ಲಿ, ಜೂನಿಯರ್ ಹಾಕಿ ಮಹಿಳಾ ತಂಡದ ಕೋಚ್ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾ*ಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ನಾಲ್ಕು ತಿಂಗಳ ಹಿಂದೆ ನಡೆದ ಈ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿ, ನಂತರ ಗರ್ಭಪಾತವಾಗಿತ್ತು. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಚಂಡೀಗಢ: ಹರ್ಯಾಣದ ರೇವಾರಿ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿ, ಗರ್ಭಿಣಿಯನ್ನಾಗಿ ಮಾಡಿದ ಆರೋಪದಡಿ ಜೂನಿಯರ್ ಹಾಕಿ ಮಹಿಳಾ ತಂಡದ ಕೋಚ್‌ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಪ್ರಕರಣ

ರೇವಾರಿ ಜಿಲ್ಲೆಯ ಹಳ್ಳಿಯೊಂದರ 12 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ಖೋಲ್ ಪೊಲೀಸ್ ಠಾಣೆಯಲ್ಲಿ ಅತ್ಯಾ*ಚಾರ ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಹಾಕಿ ಆಡುತ್ತಿದ್ದ ಈ ವಿದ್ಯಾರ್ಥಿನಿಗೆ ಈ ಕೋಚ್ ಕಳೆದ ಮೂರು ವರ್ಷಗಳಿಂದ ಪರಿಚಯವಾಗಿದ್ದರು ಎಂದು ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾಳೆ. ಆ ಬಾಲಕಿ ತರಬೇತಿ ಪಡೆಯುತ್ತಿದ್ದ ಸ್ಟೇಡಿಯಂನ ಬಾತ್‌ರೂಮ್‌ನಲ್ಲಿ ಕೋಚ್ ಕಳೆದ ನಾಲ್ಕು ತಿಂಗಳ ಹಿಂದೆ ಅತ್ಯಾ*ಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾಳೆ.

ಇದಾದ ಬಳಿಕ ಆ ಅಪ್ರಾಪ್ತ ಯುವತಿ ಗರ್ಭಿಣಿಯಾಗಿದ್ದಾಳೆ. ಇದರಿಂದ ಆಕೆಯ ಆರೋಗ್ಯ ಹದಗೆಟ್ಟಿದ್ದು, ಜನವರಿ 05ರಂದು ಆಕೆಗೆ ಗರ್ಭಪಾತವಾಗಿದೆ. ಇದಾದ ನಂತರ ಆಕೆಯನ್ನು ಅವರು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರು ಎಂದು ಸಂತ್ರಸ್ಥೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಾದ ಬಳಿಕ ಪೊಲೀಸರು ಹಾಕಿ ಕೋಚ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

"ಆರೋಪಿಯನ್ನು ಬಂಧಿಸಿದ್ದೇವೆ. ನಗರ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ನಾವು ಆತನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ" ಎಂದು ರೇವಾರಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.