ಮುಂಬೈ(ಸೆ.21): ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ತನ್ನ 500ನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸಂಭ್ರಮವನ್ನು ವಿಶೇಷವಾಗಿ ಆಚರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.
ಈ ಸಂಭ್ರಮದಲ್ಲಿ ಅಭಿಮಾನಿಗಳನ್ನು ಪಾಲ್ಗೊಳ್ಳುವಂತೆ ಮಾಡುವ ಸಲುವಾಗಿ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ಡ್ರೀಮ್ ಟೀಮ್ ಆಯ್ಕೆ ಮಾಡಲು ಅವಕಾಶ ಕಲ್ಪಿಸಿದೆ.
ಭಾರತದ ಕನಸಿನ ತಂಡ ಆಯ್ಕೆ ಮಾಡುವಂತೆ ಅಭಿಮಾನಿಗಳನ್ನು ಕೇಳಿಕೊಂಡಿದೆ. ಇದಕ್ಕಾಗಿ ಭಾರತ ಕ್ರಿಕೆಟ್ ತಂಡದ ಅಧಿಕೃತ ಫೇಸ್ ಬುಕ್ ಪೇಜ್‌ನಲ್ಲಿ ಡ್ರೀಮ್ ಟೀಮ್ ಅನ್ನು ಆಯ್ಕೆ ಮಾಡುವಂತೆ ಆಹ್ವಾನ ನೀಡಲಾಗಿದೆ. ನೀವು ನೆಚ್ಚಿನ ಆಟಗಾರರನ್ನು ಆಯ್ಕೆ ಮಾಡಿಕೊಂಡು ಮತ ಹಾಕಬಹುದು.
