ಬೆಂಗಳೂರು[ನ.28]: ಬಹುನಿರೀಕ್ಷಿತ 14ನೇ ಆವೃತ್ತಿಯ ಪುರುಷರ ಹಾಕಿ ವಿಶ್ವಕಪ್’ಗೆ ಕ್ಷಣಗಣನೆ ಆರಂಭವಾಗಿದ್ದು, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ಆತಿಥ್ಯ ವಹಿಸಿರುವ ಭಾರತ ಸೇರಿದಂತೆ ಒಟ್ಟು 16 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. 

ಹಾಕಿ ವಿಶ್ವಕಪ್ 2018: ಒಡಿಸ್ಸಾದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭ!

ಭುವನೇಶ್ವರದ ಕಳಿಂಗಾ ಮೈದಾನದಲ್ಲಿ ವಿಶ್ವಕಪ್ ಜಯಿಸಲು 14 ತಂಡಗಳು ಕಾದಾಡಲು ಸಜ್ಜಾಗಿವೆ. ಬರೋಬ್ಬರಿ 43 ವರ್ಷಗಳ ಬಳಿಕ ಪ್ರಶಸ್ತಿ ಕನಸು ಕಾಣುತ್ತಿರುವ ಭಾರತ ಇಂದು ದುರ್ಬಲ ದಕ್ಷಿಣ ಆಫ್ರಿಕಾ ಎದುರು ಸೆಣಸಲು ಸಜ್ಜಾಗಿದೆ. ಭಾರತ ’ಸಿ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಬೆಲ್ಜಿಯಂ, ದಕ್ಷಿಣ ಆಫ್ರಿಕಾ ಹಾಗೂ ಕೆನಡಾ ತಂಡಗಳು ಇದೇ ಗುಂಪಿನಲ್ಲಿವೆ.

ಒಡಿಶಾದಲ್ಲಿ ಇಂದಿನಿಂದ ಪುರುಷರ ಹಾಕಿ ವಿಶ್ವಕಪ್‌

2016ರಲ್ಲಿ ಕಿರಿಯರ ವಿಶ್ವಕಪ್ ಗೆದ್ದ ತಂಡದಲ್ಲಿದ್ದ 7 ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮನ್’ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸುತ್ತಿದ್ದು, ಹಾಕಿ ಟೀಂ ಇಂಡಿಯಾ ತವರಿನಲ್ಲಿ ಕಪ್ ಎತ್ತಿ ಹಿಡಿಯಲಿ ಎಂದು ಕ್ರೀಡಾ ತಾರೆಯರು ಟ್ವೀಟ್ ಮೂಲಕ ಶುಭ ಕೋರಿದ್ದಾರೆ.