ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನ ನೀಡಲಾಯಿತು

ಬೆಂಗಳೂರು(ಆ.09): ಮಹಿಳಾ ವಿಶ್ವಕಪ್​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​ ಆಡಿದ್ದ ಭಾರತ ತಂಡದ ಆಟಗಾರ್ತಿಯರಾದ ವೇದಾ ಕೃಷ್ಣಮೂರ್ತಿ ಮತ್ತು ರಾಜೇಶ್ವರಿ ಗಾಯಕ್ವಾಡ್ ಅವರನ್ನ ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ,ಇಬ್ಬರು ಆಟಗಾರ್ತಿಯರಿಗೆ ಮೈಸೂರು ಪೇಟ ತೊಡಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನ ನೀಡಲಾಯಿತು. ಇಂಗ್ಲೆಂಡ್​​​​​​​​​​​​​​​​​​​​​​​​​​​​​​​​ನಲ್ಲಿ ನಡೆದ ಮಹಿಳಾ ವರ್ಲ್ಡ್​ಕಪ್​ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಮುಂದಿನ ವರ್ಷ ಟಿ20 ವಿಶ್ವಕಪ್ ಮೇಲೆ ಇಬ್ಬರು ಆಟಗಾರ್ತಿಯರು ಕಣ್ಣಿಟ್ಟಿರುವುದಾಗಿ ಇಬ್ಬರು ಆಟಗಾರ್ತಿಯರು ಹೇಳಿಕೊಂಡ್ರು. ಜೊತೆಗೆ ರಾಜ್ಯ ಸಂಸ್ಥೆ ಗೌರವಿಸಿದಕ್ಕೆ ಸಂತಸ ವ್ಯಕ್ತಪಡಿಸಿದ್ರು.