ಇಂಗ್ಲೆಂಡ್ಗೆ ಹೊರಡಲು ನಾನು ಗಟ್ಟಿ ಮುಟ್ಟು-ವಿರಾಟ್!

I'm 100 percent fit and looking forward to the England tour: Virat Kohli
Highlights

ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲು ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಸಜ್ಜಾಗಿದೆ. ಪ್ರಯಾಣಕ್ಕೂ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ನಾಯಕ ವಿರಾಟ್ ಕೊಹ್ಲಿ ತಮ್ಮ ಫಿಟ್ನೆಸ್ ರಿಪೋರ್ಟ್ ಬಹಿರಂಗ ಪಡಿಸಿದ್ದಾರೆ.

ನವದೆಹಲಿ(ಜೂ.22): ಐಪಿಎಲ್ ಟೂರ್ನಿಯಲ್ಲಾದ ಇಂಜುರಿಯಿಂದ ಸಂಪೂರ್ಣ ಫಿಟ್ ಆಗಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡೋ ವಿಶ್ವಾಸವಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.  

ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ  ಸರಣಿಗಾಗಿ ಭಾರತ ಇಂದು ಪ್ರಯಾಣ ಬೆಳೆಸಲಿದೆ. ಪ್ರವಾಸಕ್ಕೂ ಮುನ್ನ ನಾಯಕ ಕೊಹ್ಲಿ ಹಾಗೂ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ  ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.  

ಇಂಗ್ಲೆಂಡ್ ಕಂಡೀಷನ್‌ನಲ್ಲಿ ಆಡಲು ಉತ್ಸುಕನಾಗಿದ್ದೇನೆ. ಕಳೆದ ನಾಲ್ಕು ವರ್ಷಗಳಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ನಾನು ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆದರೆ ಚೇತೇಶ್ವರ್ ಪೂಜಾರ ಹಾಗೂ ಇಶಾಂತ್ ಶರ್ಮಾ ಆಂಗ್ಲರ ನೆಲದಲ್ಲೂ ಅತ್ಯುತಮ ಪ್ರದರ್ಶನ ನೀಡಿದ್ದಾರೆ. ಫಿಟ್ನೆಸ್ ಹಾಗೂ ಅಭ್ಯಾಸದಿಂದ ಈ ಬಾರಿ ನಿರೀಕ್ಷಿತ ಪ್ರದರ್ಶನ ನೀಡಲಿದ್ದೇನೆ ಎಂದು ವಿರಾಟ್ ಹೇಳಿದ್ದಾರೆ.

ಜೂನ್ 27 ಹಾಗೂ 29 ರಂದು ಭಾರತ, ಐರ್ಲೆಂಡ್ ವಿರುದ್ಧ 2 ಟಿ-ಟ್ವೆಂಟಿ ಪಂದ್ಯ ಆಡಲಿದೆ. ಬಳಿಕ ಜುಲೈ 3 ರಿಂದ ಭಾರತ, ಇಂಗ್ಲೆಂಡ್ ವಿರುದ್ಧ ಮೂರು ಟಿ-ಟ್ವೆಂಟಿ, ಮೂರು ಏಕದಿನ ಹಾಗೂ 5 ಟೆಸ್ಟ್ ಪಂದ್ಯ ಆಡಲಿದೆ.

loader