ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಮಾಡಿದ ಒಂದು ಟ್ವೀಟ್ ಇದೀಗ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಮಾಡಿದ ಒಂದು ಟ್ವೀಟ್ ಇದೀಗ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ನವದೆಹಲಿ(ಆ.01): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ನಡುವಿನ ವೈಮನಸ್ಸು ಮತ್ತೊಮ್ಮೆ ಜಗಜ್ಜಾಹೀರಾಗಿದ್ದು, ರೋಹಿತ್ ಶರ್ಮಾ ಮಾಡಿದ ಒಂದು ಟ್ವೀಟ್ ಇದೀಗ ಭಾರತ ಕ್ರಿಕೆಟ್ ತಂಡದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

Add Asianetnews Kannada as a Preferred SourcegooglePreferred

ಕೊಹ್ಲಿ-ರೋಹಿತ್ ಕೋಲ್ಡ್ ವಾರ್; ಕೊನೆಗೂ ಸ್ಪಷ್ಟನೆ ನೀಡಿದ ನಾಯಕ!

'ನಾನು ದೇಶಕ್ಕಾಗಿ ಕಣಕ್ಕಿಳಿಯುತ್ತೇನೆಯೇ ಹೊರತು, ಕೇವಲ ತಂಡಕ್ಕಾಗಿ ಆಡುವುದಿಲ್ಲ' ಎಂದು ರೋಹಿತ್ ಶರ್ಮಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಅನ್ನು ಸುಮಾರು ಒಂದೂವರೆ ಲಕ್ಷ ಜನ ಲೈಕ್ ಮಾಡಿದ್ದಾರೆ. 2019ರ ವಿಶ್ವಕಪ್ ವೇಳೆಯಲ್ಲಿಯೇ ಕೊಹ್ಲಿ-ರೋಹಿತ್ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿವೆ ಎನ್ನುವ ಮಾತುಗಳು ಕೇಳಿ ಬಂದಿದ್ದವು.

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಮೂರು ಕನ್ನಡಿಗರಿಗೆ ಸ್ಥಾನ

ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ದ ನಾಯಕ ಕೊಹ್ಲಿ ಈ ರೀತಿಯ ಗಾಳಿ ಸುದ್ದಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು. ನನ್ನ ಹಾಗೂ ರೋಹಿತ್ ನಡುವೆ ಭಿನ್ನಾಭಿಪ್ರಾಯಗಳಿವೆ ಎನ್ನುವುದು ಹಾಸ್ಯಾಸ್ಪದವಾದದ್ದು ಹಾಗೆಯೇ ಆದಾರರಹಿತವಾದದ್ದು ಎಂದು ಸ್ಪಷ್ಟನೆ ನೀಡಿದ್ದರು.

ಟೀಂ ಇಂಡಿಯಾ ವಿಂಡೀಸ್‌ ಪ್ರವಾಸ: ವೇಳಾಪಟ್ಟಿ ಪ್ರಕಟ

ಭಾರತ ತಂಡವು ಆಗಸ್ಟ್ 03ರಿಂದ ತನ್ನ ಅಭಿಯಾನ ಆರಂಭಿಸಲಿದ್ದು, ಮೂರು ಟಿ20, ಆ ಬಳಿಕ ಮೂರು ಏಕದಿನ ಮತ್ತು ಕೊನೆಯಲ್ಲಿ ಎರಡು ಟೆಸ್ಟ್ ಚಾಂಪಿಯನ್ಸ್‌ಶಿಪ್ ಪಂದ್ಯಗಳನ್ನಾಡಲಿದೆ.