Asianet Suvarna News Asianet Suvarna News

ಐಸಿಸಿ ನೂತನ ಏಕದಿನ ರ‍್ಯಾಂಕಿಂಗ್ ಪ್ರಕಟ; ಭಾರತೀಯರೇ ನಂ.1

ತಂಡಗಳ ವಿಭಾಗದಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಆ ಬಳಿಕ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ತಂಡಗಳು ಮೊದಲ 5 ಸ್ಥಾನಗಳಲ್ಲಿವೆ. 

ICC Announces Latest ODI Team and Player Rankings
Author
Dubai - United Arab Emirates, First Published Oct 8, 2018, 3:57 PM IST

ದುಬೈ[ಅ.08]: ಐಸಿಸಿ ನೂತನ ಏಕದಿನ ರ‍್ಯಾಂಕಿಂಗ್ ಪ್ರಕಟಗೊಂಡಿದ್ದು, ಬ್ಯಾಟಿಂಗ್’ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಬೌಲಿಂಗ್’ನಲ್ಲಿ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಬೌಲರ್ ಫೆಲುಕ್ವಾಯೋ 9 ಸ್ಥಾನ ಏರಿಕೆ ಕಂಡು 35ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಮತ್ತೋರ್ವ ಆಫ್ರಿಕಾದ ವೇಗಿ ಲುಂಗಿಸನಿ ಎನ್’ಗಿಡಿ 19 ಸ್ಥಾನ ಏರಿಕೆ ಕಂಡು 60ನೇ ಸ್ಥಾನಕ್ಕೆ ಲಗ್ಗೆಯಿಡುವುದರೊಂದಿಗೆ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ತಂಡಗಳ ವಿಭಾಗದಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಆ ಬಳಿಕ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ತಂಡಗಳು ಮೊದಲ 5 ಸ್ಥಾನಗಳಲ್ಲಿವೆ. 

ಇನ್ನು ಬ್ಯಾಟ್ಸ್’ಮನ್’ಗಳ ಶ್ರೇಯಾಂಕದಲ್ಲೂ ಮೊದಲ 8 ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ, ಜೋ ರೂಟ್, ಡೇವಿಡ್ ವಾರ್ನರ್ ಹಾಗೂ ಶಿಖರ್ ಧವನ್ ಮೊದಲ 5 ಸ್ಥಾನಗಳಲ್ಲಿ ಮುಂದುವರೆದಿದ್ದಾರೆ. ಟಾಪ್ 20 ಪಟ್ಟಿಯಲ್ಲಿ ಧೋನಿ 18ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಗದ ಟಾಪ್ 5 ಪಟ್ಟಿಯಲ್ಲಿ ಕೂಡಾ ಯಾವುದೇ ಬದಲಾವಣೆಗಳಾಗಿಲ್ಲ. ಬುಮ್ರಾ ಮೊದಲ ಸ್ಥಾನದಲ್ಲಿದ್ದರೆ, ರಶೀದ್ ಖಾನ್, ಕುಲ್ದೀಪ್‌ ಯಾದವ್, ಟ್ರೆಂಟ್ ಬೌಲ್ಟ್ ಹಾಗೂ ಜೋಸ್ ಹ್ಯಾಜಲ್’ವುಡ್ ಮೊದಲ 5 ಸ್ಥಾನಗಳಲ್ಲಿ ಮುಂದುವರೆದಿದ್ದಾರೆ.

ಇನ್ನು ಆಲ್ರೌಂಡ್ ವಿಭಾಗದಲ್ಲಿ ಭಾರತದ ಯಾವೊಬ್ಬ ಆಟಗಾರನು ಸ್ಥಾನ ಪಡೆದಿಲ್ಲ. ರಶೀದ್ ಖಾನ್ ಅಗ್ರಸ್ಥಾನದಲ್ಲೇ ಮುಂದುವರೆದಿದ್ದರೆ, ಶಕೀಬ್ ಅಲ್ ಹಸನ್, ಮೊಹಮ್ಮದ್ ನಬೀ, ಮಿಚೆಲ್ ಸ್ಯಾಂಟ್ನರ್ ಹಾಗೂ ಮೊಹಮ್ಮದ್ ಹಫೀಜ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.  

Follow Us:
Download App:
  • android
  • ios