ದುಬೈ(ಸೆ.16): ಆ್ಯಷಸ್ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್  ರ‍್ಯಾಂಕಿಂಗ್ ಪ್ರಕಟಿಸಿದೆ. ಆ್ಯಷಸ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಅಗ್ರಸ್ಥಾನ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಟಾಪ್ 5 ಪಟ್ಟಿಯಲ್ಲಿ ಭಾರತದ ಚೇಶ್ವರ್ ಪೂಜಾರ ಕೂಡ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೇವಲ 12 ಮ್ಯಾಚ್: 85ರಿಂದ 3ನೇ ರ‍್ಯಾಂಕ್, ಇದು ಬುಮ್ರಾ ಝಲಕ್..!

ಸ್ಟೀವ್ ಸ್ಮಿತ್ 937 ರೇಟಿಂಗ್ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 903 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಚೇತೇಶ್ವರ್ ಪೂಜಾರ 825 ಅಂಕಗಳೊಂದಿಗೆ 4ನೇ ಸ್ಥಾನ ಹಾಗೂ ಅಜಿಂಕ್ಯ ರಹಾನೆ 7ನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ಟ್ವೀಟ್ ಮಾಡೋವಾಗ ಇನ್ಮೇಲೆ ಯೋಚನೆ ಮಾಡ್ತಿನಿ ಕೊಹ್ಲಿ!

ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾಟ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಭಾರತದ ವೇಗಿ ಜಸ್ಪ್ರೀತ್ ಬುಮ್ರಾ 3 ಹಾಗೂ ರವೀಂದ್ರ ಜಡೇಜಾ 11 ನೇ ಸ್ಥಾನ ಪಡೆದಿದ್ದಾರೆ.