ಜೂನ್.4ರಂದು ಎಡ್ಜ್‌'ಬಾಸ್ಟನ್‌'ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌'ಗಳು ಕೇವಲ ಅರ್ಧ ಗಂಟೆಯಲ್ಲಿ ಖಾಲಿಯಾಗಿವೆ.
ಲಂಡನ್(ಮೇ.11): ಜೂನ್ 1ರಿಂದ ಪ್ರಾರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದ್ದು, ಭಾರತದ ಎಲ್ಲಾ ಪಂದ್ಯಗಳ ಟಿಕೆಟ್ಗಳು ಕೆಲವೇ ಗಂಟೆಗಳಲ್ಲಿ ಬಿಕರಿಯಾಗಿವೆ, ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅದರಲ್ಲೂ ಜೂನ್.4ರಂದು ಎಡ್ಜ್'ಬಾಸ್ಟನ್'ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್'ಗಳು ಕೇವಲ ಅರ್ಧ ಗಂಟೆಯಲ್ಲಿ ಖಾಲಿಯಾಗಿವೆ.
ಹಾಲಿ ಚಾಂಪಿಯನ್ ಭಾರತದ ಆಟವನ್ನು ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದು, ಕಳೆದ ಬಾರಿಗಿಂತ ಈ ಬಾರಿ ಬೇಡಿಕೆ ಹೆಚ್ಚಿದೆ ಎನ್ನಲಾಗಿದೆ.
