ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ..! ಆದರೆ ಇನ್ನು 10 ವರ್ಷ ಕಾಯಬೇಕು

First Published 27, Apr 2018, 5:08 PM IST
ICC Hopeful of Cricket Inclusion at 2028 Olympics
Highlights

2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಜಿ ಸಲ್ಲಿಸಲು ಗಡುವು ಮುಗಿದಿದ್ದು, 2028ರ ಕ್ರೀಡಾಕೂಟಕ್ಕೆ ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಆದರೆ ಒಲಿಂಪಿಕ್ಸ್'ನಲ್ಲಿ ಪಾಲ್ಗೊಳ್ಳುವ ಬಗ್ಗೆ ಬಿಸಿಸಿಐ ತಕರಾರು ತೆಗೆದಿದೆ. 

ಕೋಲ್ಕತಾ[ಏ.27]: ಒಲಿಂಪಿಕ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಕೊನೆಗೂ ಮರಳುವ ಸಾಧ್ಯತೆ ದಟ್ಟವಾಗಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌’ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಪ್ರಯತ್ನ ಆರಂಭವಾಗಿದೆ ಎಂದು ಐಸಿಸಿ
ಸಿಇಓ ರಿಚರ್ಡ್‌ಸನ್ ತಿಳಿಸಿದ್ದಾರೆ. 
2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಜಿ ಸಲ್ಲಿಸಲು ಗಡುವು ಮುಗಿದಿದ್ದು, 2028ರ ಕ್ರೀಡಾಕೂಟಕ್ಕೆ ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಆದರೆ ಒಲಿಂಪಿಕ್ಸ್'ನಲ್ಲಿ ಪಾಲ್ಗೊಳ್ಳುವ ಬಗ್ಗೆ ಬಿಸಿಸಿಐ ತಕರಾರು ತೆಗೆದಿದೆ. 
ಒಂದೊಮ್ಮೆ ಭಾರತ ಕ್ರಿಕೆಟ್ ತಂಡ ಒಲಿಂಪಿಕ್ಸ್‌ಗೆ ತೆರಳಬೇಕಿದ್ದರೆ, ಭಾರತೀಯ ಒಲಿಂಪಿಕ್ ಸಮಿತಿ ಅಡಿಯಲ್ಲಿ ಬರಬೇಕಿದೆ. ಆಗ ಬಿಸಿಸಿಐ ಕಾಪಾಡಿಕೊಂಡು ಬಂದಿರುವ ಸ್ವಾಯತ್ತತೆ ಕಳೆದುಕೊಳ್ಳಲಿದೆ. 

loader