ದುಬೈ[ಅ.08]: ಆರಂಭಿಕನಾಗಿ ಬಡ್ತಿ ಪಡೆದು ಆಡಿದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್’ನಲ್ಲಿ ಭರ್ಜರಿ ಶತಕ ಸಿಡಿಸಿ ಹಲವಾರು ದಾಖಲೆ ಬರೆದ ರೋಹಿತ್ ಶರ್ಮಾ, ಐಸಿಸಿ ನೂತನವಾಗಿ ಬಿಡುಗಡೆ ಮಾಡಿದ ಟೆಸ್ಟ್ ರ‍್ಯಾಂಕಿಂಗ್’ನಲ್ಲೂ 26 ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. 

ಭಾರತ-ದಕ್ಷಿಣ ಆಫ್ರಿಕಾ ನಡುವಿನ ವೈಜಾಗ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ರೋಹಿತ್ ಶರ್ಮಾ 176 ಹಾಗೂ ಎರಡನೇ ಇನಿಂಗ್ಸ್’ನಲ್ಲಿ 127 ರನ್ ಸಿಡಿಸಿದ್ದರು. ಅಲ್ಲದೇ ಟೆಸ್ಟ್ ಪಂದ್ಯವೊಂದರಲ್ಲಿ[14] ಗರಿಷ್ಠ ಸಿಕ್ಸರ್ ಸಿಡಿಸಿದ ಅಪರೂಪದ ವಿಶ್ವದಾಖಲೆಯನ್ನು ರೋಹಿತ್ ಬರೆದಿದ್ದರು. ಇದರ ಜೊತೆಗೆ ಪಂದ್ಯಶ್ರೇಷ್ಠ ಗೌರವಕ್ಕೂ ರೋಹಿತ್ ಭಾಜನರಾಗಿದ್ದರು.

ಛೇ, ಛೇ, ರೋಹಿತ್ ಶರ್ಮಾ ನೀ ’ಆಡಿದ್ದು’ ಸರಿನಾ..?

ಇನ್ನು ಟೀಂ ಇಂಡಿಯಾದ ಮತ್ತೋರ್ವ ಆರಂಭಿಕ ಬ್ಯಾಟ್ಸ್ ಮನ್ ಕನ್ನಡಿಗ ಮಯಾಂಕ್ ಅಗರ್‌ವಾಲ್ ಕೂಡಾ ಚೊಚ್ಚಲ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ್ದರು. ಮಯಾಂಕ್ ಕೂಡಾ 38 ಸ್ಥಾನ ಮೇಲೇರಿ 25ನೇ ಸ್ಥಾನ ಪಡೆಯುವುದರೊಂದಿಗೆ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೈಜಾಗ್ ಟೆಸ್ಟ್ ಪಂದ್ಯದಲ್ಲಿ 20 ಹಾಗೂ 31* ರನ್ ಬಾರಿಸಿದ್ದರಿಂದ ರೇಟಿಂಗ್ ಅಂಕದಲ್ಲಿ 899 ಅಂಕ ಪಡೆದಿದ್ದಾರೆ. ಈ ಮೂಲಕ 2018ರ ನಂತರ ಕೊಹ್ಲಿ ಇದೇ ಮೊದಲ ಬಾರಿಗೆ 900 ರೇಟಿಂಗ್’ಗಿಂತ ಕಡಿಮೆ ಅಂಕ ಪಡೆದಿದ್ದಾರೆ.

ವಾಚ್ ಕಟ್ಟಿಕೊಂಡು ಸರ್ಜರಿ ಮಾಡಿದ್ರಾ; ಪಾಂಡ್ಯ ಕಾಲೆಳೆದ ಕೊಹ್ಲಿ ಮಾಜಿ ಗೆಳತಿ!

ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್, ಚೇತೇಶ್ವರ್ ಪೂಜಾರ, ಹೆನ್ರಿ ನಿಕೋಲಸ್ ಕ್ರಮವಾಗಿ ಮೊದಲ 5 ಸ್ಥಾನ ಪಡೆದಿದ್ದಾರೆ. ಆ ಬಳಿಕ ಜೋ ರೂಟ್ ಆರನೇ ಸ್ಥಾನ ಪಡೆದರೆ, ಭಾರತ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲೇ ಆಕರ್ಷಕ ಶತಕ ಸಿಡಿಸಿದ ಕ್ವಿಂಟನ್ ಡಿಕಾಕ್ 4 ಸ್ಥಾನ ಏರಿಕೆ ಕಂಡು, 7ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನುಳಿದಂತೆ ಟಾಮ್ ಲಾಥಮ್ ಹಾಗೂ ದೀಮುತ್ ಕರುಣರತ್ನೆ ಕ್ರಮವಾಗಿ 8 ಹಾಗೂ 9ನೇ ಸ್ಥಾನ ಪಡೆದರೆ, ಅಜಿಂಕ್ಯ ರಹಾನೆ 3 ಸ್ಥಾನ ಕುಸಿದು 10ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. 

ಶಮಿ-ಜಡೇಜಾ ಅಬ್ಬರ; ಟೀಂ ಇಂಡಿಯಾ ಕೈವಶವಾದ ವೈಜಾಗ್ ಟೆಸ್ಟ್

ಇನ್ನು ಬೌಲಿಂಗ್ ವಿಭಾಗದಲ್ಲಿ 2018ರ ಬಳಿಕ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಕಮ್’ಬ್ಯಾಕ್ ಮಾಡಿದ ರವಿಚಂದ್ರನ್ ಅಶ್ವಿನ್ 8 ವಿಕೆಟ್ ಪಡೆದು ಗಮನ ಸೆಳೆದಿದ್ದರು. ಇದರೊಂದಿಗೆ ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್’ನಲ್ಲೂ ಚೇತರಿಕೆ ಕಂಡು ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲೇ ಮುಂದುವರೆದರೆ, ಕಗಿಸೋ ರಬಾಡ ಹಾಗೂ ಜಸ್ಪ್ರೀತ್ ಬುಮ್ರಾ ಮೊದಲ 3 ಸ್ಥಾನದಲ್ಲಿ ಭದ್ರವಾಗಿದ್ದಾರೆ.

ರೋಹಿತ್ ಆರ್ಭಟಕ್ಕೆ 25 ವರ್ಷದ ದಾಖಲೆ ಧೂಳೀಪಟ..!

ಆಲ್ರೌಂಡರ್ ವಿಭಾಗದಲ್ಲಿ ಲಾಂಗ್ ಜಂಪ್ ಮಾಡಿರುವ ರವೀಂದ್ರ ಜಡೇಜಾ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಜಡೇಜಾ ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದರು. ಇದರೊಂದಿಗೆ ಶಕೀಬ್ ಅಲ್ ಹಸನ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. ವೆಸ್ಟ್ ಇಂಡೀಸ್ ನಾಯಕ ಜೇಸನ್ ಹೋಲ್ಡರ್ ಆಲ್ರೌಂಡರ್ ವಿಭಾಗದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.