ಬಹುನಿರೀಕ್ಷಿತ 12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಕ್ರಿಕೆಟ್ ಮಹಾ ಸಂಗ್ರಾಮಕ್ಕೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ಸೇರಿದಂತೆ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.

ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡ ಮೊದಲಿಗೆ ಅರ್ಹತೆ ಗಿಟ್ಟಿಸಿಕೊಂಡಿತ್ತು. ಇನ್ನುಳಿದಂತೆ ಐಸಿಸಿ ಶ್ರೇಯಾಂಕದಲ್ಲಿ ಟಾಪ್- 08 ಸ್ಥಾನ ಹೊಂದಿದ್ದ ತಂಡಗಳು ವಿಶ್ವಕಪ್ ಟೂರ್ನಿಗೆ ಭಾಗವಹಿಸಲು ನೇರ ಅರ್ಹತೆಗಿಟ್ಟಿಸಿಕೊಂಡಿದ್ದವು. ಇನ್ನು 2018ರಲ್ಲಿ ಜಿಂಬಾಬ್ವೆಯಲ್ಲಿ ನಡೆದ ವಿಶ್ವಕಪ್ ಅರ್ಹತಾ ಸುತ್ತಿನ ಟೂರ್ನಿಯಲ್ಲಿ ಪಾಲ್ಗೊಂಡ ಆಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಅರ್ಹತೆ ಗಿಟ್ಟಿಸಿಕೊಂಡಿದ್ದವು.

2019ರ ವಿಶ್ವಕಪ್’ನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...

ಈಗಾಗಲೇ ಎಲ್ಲಾ 10 ದೇಶಗಳು 15 ಆಟಗಾರರನ್ನೊಳಗೊಂಡ ಬಲಿಷ್ಠ ತಂಡವನ್ನೇ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿದೆ. 2015ನೇ ವಿಶ್ವಕಪ್ ಟೂರ್ನಿಯ ರನ್ನರ್ ಅಪ್ ನ್ಯೂಜಿಲೆಂಡ್ ಮೊದಲು ತನ್ನ 15 ಆಟಗಾರರ ತಂಡವನ್ನು ಪ್ರಕಟಿಸಿತು. ಇನ್ನು ಭಾರತವೂ ಸೇರಿದಂತೆ ಉಳಿದೆಲ್ಲಾ ದೇಶಗಳು ತಮ್ಮ 15 ಆಟಗಾರರನ್ನೊಳಗೊಂಡ ತಂಡವನ್ನು ಅಂತಿಮಗೊಳಿಸಿವೆ.   

ಈ ಸಂದರ್ಭದಲ್ಲಿ ಎಲ್ಲಾ 10 ತಂಡಗಳ ಸಂಪೂರ್ಣ ಪಟ್ಟಿಯನ್ನು ಸುವರ್ಣನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ಯಾರು 2019ನೇ ಸಾಲಿನ ಏಕದಿನ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ತಂಡಗಳಲ್ಲಿ ಯಾವ ತಂಡ ಬಲಿಷ್ಠವಾಗಿದೆ ಹಾಗೂ ನಿಮ್ಮ ನೆಚ್ಚಿನ ತಂಡ ಯಾವುದು ಕಮೆಂಟ್ ಮಾಡಿ... 

1. ಭಾರತ 

2. ಇಂಗ್ಲೆಂಡ್

3. ಆಸ್ಟ್ರೇಲಿಯಾ

4. ನ್ಯೂಜಿಲೆಂಡ್

5. ಪಾಕಿಸ್ತಾನ

6. ದಕ್ಷಿಣ ಆಫ್ರಿಕಾ

7. ಶ್ರೀಲಂಕಾ

8. ಬಾಂಗ್ಲಾದೇಶ

9. ಆಫ್ಘಾನಿಸ್ತಾನ

10. ವೆಸ್ಟ್ ಇಂಡೀಸ್