ಶ್ರೀಲಂಕಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ 2 ಸ್ಥಾನ ಏರಿಕೆ ಕಂಡು 5ನೇ ಸ್ಥಾನಕ್ಕೆ ಲಗ್ಗೆಯಿಟ್ಟರೆ, ಅಂತಿಮ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಧವನ್ 14ನೇ ಸ್ಥಾನಕ್ಕೇರಿದ್ದಾರೆ.

ದುಬೈ(ಡಿ.18): ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್'ಮನ್ ರೋಹಿತ್ ಶರ್ಮಾ ಐಸಿಸಿ ಬಿಡುಗಡೆ ಮಾಡಿದ ನೂತನ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲೇ ಮುಂದುವರೆದಿದ್ದಾರೆ.

ಶ್ರೀಲಂಕಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ 2 ಸ್ಥಾನ ಏರಿಕೆ ಕಂಡು 5ನೇ ಸ್ಥಾನಕ್ಕೆ ಲಗ್ಗೆಯಿಟ್ಟರೆ, ಅಂತಿಮ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಧವನ್ 14ನೇ ಸ್ಥಾನಕ್ಕೇರಿದ್ದಾರೆ. ಕೊಹ್ಲಿ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದರೆ, ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದರೆ, ಡೇವಿಡ್ ವಾರ್ನರ್ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಹಸನ್ ಅಲಿ, ಇಮ್ರಾನ್ ತಾಹಿರ್ ಹಾಗೂ ಜಸ್ಪ್ರೀತ್ ಬುಮ್ರಾ ಕ್ರಮವಾಗಿ ಮೊದಲ 3 ಸ್ಥಾನ ಹಂಚಿಕೊಂಡಿದ್ದಾರೆ.