ICC ನೂತನ ಏಕದಿನ ಶ್ರೇಯಾಂಕ ಪ್ರಕಟ; ಟೀಂ ಇಂಡಿಯಾ ಆಟಗಾರರೇ ನಂ.1
ಐಸಿಸಿ ನೂತನ ಏಕದಿನ ಶ್ರೇಯಾಂಕ ಪ್ರಕಟಗೊಂಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಭಾಗದಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದರೆ, ಬೌಲಿಂಗ್‌ನಲ್ಲಿ ಬುಮ್ರಾ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..
ದುಬೈ[ಅ.04]: ಐಸಿಸಿ ಪುರುಷರ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್’ನಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗಿ ಜಸ್‌ಪ್ರೀತ್ ಬುಮ್ರಾ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.
ರೋಹಿತ್‌ಗೆ ಡ್ರೆಸ್ಸಿಂಗ್ ರೂಂ ಬಾಗಿಲು ತೆರೆದ ನಾಯಕ ಕೊಹ್ಲಿ..!
ಗುರುವಾರ ನೂತನವಾಗಿ ಬಿಡುಗಡೆಯಾದ ಏಕದಿನ ಕ್ರಿಕೆಟ್‌ನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ (895 ರೇಟಿಂಗ್) ಮೊದಲ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (863 ರೇಟಿಂಗ್) 2ನೇ ಸ್ಥಾನ ಪಡೆದಿದ್ದಾರೆ.
ಆಫ್ರಿಕಾ ಎದುರು ಟಿ20 ಸರಣಿ ಕೈವಶ ಮಾಡಿಕೊಂಡ ಮಹಿಳಾ ಟೀಂ ಇಂಡಿಯಾ
ಬೌಲರ್‌ಗಳ ಪಟ್ಟಿಯಲ್ಲಿ ವೇಗಿ ಜಸ್‌ಪ್ರೀತ್ ಬುಮ್ರಾ (797 ರೇಟಿಂಗ್) ಪಡೆದು ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧ 4 ವಿಕೆಟ್ ಪಡೆದು ಮಿಂಚಿದ್ದ ಪಾಕಿಸ್ತಾನ ಮೊಹಮ್ಮದ್ ಆಮೀರ್ 6 ಸ್ಥಾನ ಏರಿಕೆ ಕಂಡು ಇದೇ ಮೊದಲ ಬಾರಿಗೆ 7ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಈ ವರ್ಷಾರಂಭದಲ್ಲಿ ಟೆಸ್ಟ್ ಕ್ರಿಕೆಟ್’ಗೆ ಗುಡ್ ಬೈ ಹೇಳಿರುವ ಆಮೀರ್, 2019ರ ಜೂನ್ ವೇಳೆಗೆ 10ನೇ ಶ್ರೇಯಾಂಕಕ್ಕೇರಿದ್ದೇ ಇದುವರೆಗಿನ ಸಾಧನೆಯಾಗಿತ್ತು.
ಏಕದಿನ ತಂಡಗಳ ರ‍್ಯಾಂಕಿಂಗ್’ನಲ್ಲಿ ಭಾರತ (122 ರೇಟಿಂಗ್) ಪಡೆದು 2ನೇ ಸ್ಥಾನದಲ್ಲಿದ್ದರೆ, ಹಾಲಿ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ (125 ರೇಟಿಂಗ್‌ನಿಂದ) ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನುಳಿದಂತೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿವೆ.