ದುಬೈ(ನ.02): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಮುಗಿದ ಬೆನ್ನಲ್ಲೇ ಐಸಿಸಿ ಏಕದಿನ ರ‍್ಯಾಂಕಿಂಗ್‌ ಪ್ರಕಟಿಸಿದೆ. ನೂತನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಶಿಖರ್ ಧವನ್ 9ನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಎಂ.ಎಸ್.ಧೋನಿ 21ನೇ ಸ್ಥಾನದಲ್ಲಿದ್ದಾರೆ. 

ಏಕದಿನ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ ಮೊದಲ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನವನ್ನ ಸ್ಪಿನ್ನರ್ ಕುಲ್ದೀಪ್ ಯಾದವ್ ಆಕ್ರಮಿಸಿಕೊಂಡಿದ್ದಾರೆ. ಇನ್ನು ಯಜುವೇಂದ್ರ ಚೆಹಾಲ್ 8ನೇ ಸ್ಥಾನಕ್ಕೇರಿದ್ದಾರೆ.