ಒಟ್ಟು 826 ಅಂಕದೊಂದಿಗೆ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡರೆ, ಕೊಹ್ಲಿಗಿಂತ 39 ಅಂಕ ಹಿಂದಿರುವ ಆಸ್ಟ್ರೇಲಿಯಾದ ಆರೋನ್ ಫಿಂಚ್ ಎರಡು ಹಾಗೂ ವೆಸ್ಟ್'ಇಂಡೀಸ್‌'ನ ಎವಿನ್ ಲೀವಿಸ್ ಮೂರನೇ ಸ್ಥಾನದಲ್ಲಿದ್ದಾರೆ.

ನವದೆಹಲಿ(ಸೆ.18): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಶ್ರೇಯಾಂಕ ಪಟ್ಟಿಯ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಟ್ಟು 826 ಅಂಕದೊಂದಿಗೆ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡರೆ, ಕೊಹ್ಲಿಗಿಂತ 39 ಅಂಕ ಹಿಂದಿರುವ ಆಸ್ಟ್ರೇಲಿಯಾದ ಆರೋನ್ ಫಿಂಚ್ ಎರಡು ಹಾಗೂ ವೆಸ್ಟ್'ಇಂಡೀಸ್‌'ನ ಎವಿನ್ ಲೀವಿಸ್ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನಕ್ಕೇರಿದ್ದಾರೆ. ಪಾಕಿಸ್ತಾನದ ಇಮಾದ್ ವಾಸೀಂ ಅಗ್ರಸ್ಥಾನಕ್ಕೇರಿದ್ದಾರೆ.

ಇನ್ನು ಟಿ20 ತಂಡಗಳ ವಿಭಾಗದಲ್ಲಿ ನ್ಯೂಜಿಲ್ಯಾಂಡ್ ಅಗ್ರಸ್ಥಾನ ಉಳಿಸಿಕೊಂಡಿದ್ದರೆ, ಭಾರತ 5ನೇ ಸ್ಥಾನದಲ್ಲಿದೆ.