ಟೂರ್ನಿಯ ಭದ್ರತೆ ಬಗ್ಗೆ ಈಗಾಗಲೇ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವ ಕ್ರಿಕೆಟ್ ಮಂಡಳಿ ತಿಳಿಸಿದೆ.

ದುಬೈ(ಮೇ.24): ಮುಂದಿನ ತಿಂಗಳಿಂದ ಇಂಗ್ಲೆಂಡ್‌'ನಲ್ಲಿ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಗಳಿಗೆ ಬಿಗಿ ಭದ್ರತೆ ಒದಗಿಸಲಾಗುವುದು ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹೇಳಿದೆ.

Add Asianetnews Kannada as a Preferred SourcegooglePreferred

ಸೋಮವಾರ ಮ್ಯಾಂಚೆಸ್ಟರ್‌'ನಲ್ಲಿ ಉಗ್ರರ ದಾಳಿಯಿಂದಾಗಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ ಉಗ್ರರು 22 ಮಂದಿ ನಾಗರೀಕರನ್ನು ಹತ್ಯೆ ಮಾಡಿದ್ದರು. ಹೀಗಾಗಿ ಕ್ರಿಕೆಟ್ ಪಂದ್ಯಾವಳಿ ನಡೆಯುವ ಸ್ಥಳಗಳಲ್ಲಿ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗುವುದು ಎಂದು ಐಸಿಸಿ ಅಧಿಕಾರಿಗಳು ಹೇಳಿದ್ದಾರೆ.

ಜೂನ್ 1 ರಿಂದ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ಮ್ಯಾಂಚೆಸ್ಟರ್‌'ನಲ್ಲಿ ನಡೆಯುವುದಿಲ್ಲ. ಆದರೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಲಂಡನ್, ಬರ್ಮಿಂಗ್‌'ಹ್ಯಾಮ್ ಮತ್ತು ಕಾರ್ಡಿಫ್‌'ಗಳಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ.

ಇದರ ಜೊತೆಗೆ ಮಹಿಳಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂನ್ 24 ರಿಂದ ಜುಲೈ 23ರವರೆಗೆ ನಡೆಯಲಿದೆ. ಈ ಎರಡೂ ಟೂರ್ನಿಯ ಭದ್ರತೆ ಬಗ್ಗೆ ಈಗಾಗಲೇ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವ ಕ್ರಿಕೆಟ್ ಮಂಡಳಿ ತಿಳಿಸಿದೆ.