ಬೆಂಗಳೂರು[ನ.02]: ಇದೇ ತಿಂಗಳ 9ರಿಂದ 24ರವರೆಗೆ ನಡೆಯಲಿರುವ 6ನೇ ಆವೃತ್ತಿಯ ಮಹಿಳಾ ವಿಶ್ವಕಪ್ ಟಿ20 ಟೂರ್ನಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದ್ದು, 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ವೆಸ್ಟ್ ಇಂಡೀಸ್ ಎರಡನೇ ಬಾರಿಗೆ ಚುಟುಕು ಕ್ರಿಕೆಟ್ ಸಂಗ್ರಾಮಕ್ಕೆ ಕೆರಿಬಿಯನ್ ನಾಡು ಸಜ್ಜಾಗಿದೆ.

ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನ ತಂಡಗಳು ವಿಶ್ವಕಪ್’ಗೆ ನೇರವಾಗಿ ಅರ್ಹತೆಗಿಟ್ಟಸಿಕೊಂಡರೆ, ಬಾಂಗ್ಲಾದೇಶ ಹಾಗೂ ಐರ್ಲೆಂಡ್ ತಂಡಗಳು ಕ್ವಾಲಿಫೈಯರ್ ಹಂತದಲ್ಲಿ ಕಾದಾಡಿ ಅರ್ಹತೆಗಿಟ್ಟಿಸಿವೆ. 10 ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಿದ್ದು, A ಗುಂಪಿನಲ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್ ಇಂಡೀಸ್ ಹಾಗೂ ಬಾಂಗ್ಲಾದೇಶ ತಂಡಗಳು ಸ್ಥಾನ ಪಡೆದಿವೆ. ಇನ್ನು B ಗುಂಪಿನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಐರ್ಲೆಂಡ್ ತಂಡಗಳು ಸ್ಥಾನ ಪಡೆದಿವೆ.

ಭಾರತ ಇದುವರೆಗೂ ಒಮ್ಮೆಯೂ ಪ್ರಶಸ್ತಿ ಜಯಿಸಿಲ್ಲ. ಈ ಬಾರಿ ಹರ್ಮನ್’ಪ್ರೀತ್ ಕೌರ್ ನೇತೃತ್ವದ ಮಹಿಳೆಯರ ಟೀಂ ಇಂಡಿಯಾ ಹೊಸ ಇತಿಹಾಸ ಸೃಷ್ಠಿಸುವ ವಿಶ್ವಾಸದಲ್ಲಿದೆ. ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡವು ಬಲಿಷ್ಠ ನ್ಯೂಜಿಲೆಂಡ್ ತಂಡದೆದುರು ಸೆಣಸಲಿದೆ. ಗುಂಪು ಹಂತದ ಪಂದ್ಯಗಳ ಬಳಿಕ ನವೆಂಬರ್ 22 ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ’ಎ’ ಗುಂಪಿನಲ್ಲಿ ಅಗ್ರಸ್ಥಾನ ಹೊಂದಿದ ತಂಡವು ’ಬಿ’ ಗುಂಪಿನಲ್ಲಿ 2ನೇ ಸ್ಥಾನ ಪಡೆದ ತಂಡದೊಂದಿಗೆ ಕಾದಾಡಿದರೇ, ಬಿ ಗುಂಪಿನಲ್ಲಿ ಮೊದಲ ಸ್ಥಾನ ಪಡೆದ ತಂಡವು ’ಎ’ ಗುಂಪಿನಲ್ಲಿ 2ನೇ ಸ್ಥಾನ ಪಡೆದ ತಂಡದೊಂದಿಗೆ ಪ್ರಶಸ್ತಿ ಸುತ್ತಿಗಾಗಿ ಸೆಣಸಲಿವೆ. ಫೈನಲ್ ಪಂದ್ಯ ನವೆಂಬರ್ 24ರಂದು ನಡೆಯಲಿದೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ..