ದುಬೈ(ಫೆ.13): ಭಾರತದ ಮಹಿಳಾ ಕ್ರಿಕೆಟ್‌ ತಂಡದ ಯುವ ಆಟಗಾರ್ತಿ ಜೆಮಿಮಾ ರೋಡ್ರಿಗಾಸ್‌, ಮಂಗಳವಾರ ಪ್ರಕಟಗೊಂಡ ಐಸಿಸಿ ಟಿ20 ಬ್ಯಾಟರ್‌ಗಳ ನೂತನ ಪಟ್ಟಿಯಲ್ಲಿ 4 ಸ್ಥಾನಗಳ ಏರಿಕೆ ಕಂಡು 2ನೇ ಸ್ಥಾನ ಪಡೆದಿದ್ದಾರೆ. ಅತ್ಯುತ್ತಮ ಲಯದಲ್ಲಿರುವ ಸ್ಮೃತಿ ಮಂಧನಾ ಸಹ 4 ಸ್ಥಾನಗಳ ಏರಿಕೆ ಕಂಡಿದ್ದು 6ನೇ ಸ್ಥಾನದಲ್ಲಿದ್ದಾರೆ. 

ಇದನ್ನೂ ಓದಿ: ಆಸೀಸ್‌ ವಿರುದ್ಧ ತಮಾಷೆ: ವೀರೂಗೆ ಹೇಡನ್‌ ಎಚ್ಚರಿಕೆ!

ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಪಿನ್ನರ್‌ ರಾಧಾ ಯಾದವ್‌ 10ನೇ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ತಂಡಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿ ಮುಂದುವರಿದಿದೆ. ಮಹಿಳಾ ಏಕದಿನ ಮಾದರಿಯಲ್ಲಿ ಸ್ಮೃತಿ ಮಂಧನಾ ಬ್ಯಾಟರ್ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇದನ್ನೂ ಓದಿ: ಪ್ರೊ ಕಬಡ್ಡಿ v/s ನ್ಯೂ ಕಬಡ್ಡಿ- ಗೊಂದಲದಲ್ಲಿ ಆಟಗಾರರು!

ಹಿರಿಯ ಆಟಗಾರ್ತಿ ಮಿಥಾಲಿ ರಾಜ್ 5ನೇ ಸ್ಥಾನದಲ್ಲಿದ್ದಾರೆ. ಏಕದಿನ ಬೌಲಿಂಗ್‌ನಲ್ಲಿ ಜುಲನ್ ಗೋಸ್ವಾಮಿ 4ನೇ ಸ್ಥಾನದಲ್ಲಿದ್ದರೆ, ಆಲ್ರೌಂಡರ್ ವಿಭಾಗದಲ್ಲಿ ಭಾರತ ದೀಪ್ತಿ ಶರ್ಮಾ 4ನೇ ಸ್ಥಾನ ಅಲಂಕರಿಸಿದ್ದಾರೆ.