ಕಾರ್ಡಿಫ್[ಮೇ.29]: ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಭ್ಯಾಸ ಪಂದ್ಯಗಳಲ್ಲಿ ಭರ್ಜರಿಯಾಗಿಯೇ ಬೆವರು ಹರಿಸುತ್ತಿದೆ. ಆದರೆ ಟೀಂ ಇಂಡಿಯಾದ ಆರಂಭಿಕರು ಮೊದಲೆರಡು ಅಭ್ಯಾಸ ಪಂದ್ಯಗಳಲ್ಲಿ ತಮ್ಮ ಲಯ ಕಂಡುಕೊಳ್ಳಲು ವಿಫಲವಾಗಿರುವುದು ಭಾರತೀಯ ಅಭಿಮಾನಿಗಳ ಚಿಂತೆಯನ್ನು ಹೆಚ್ಚಿಸಿದೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಧವನ್ ಹಾಗೂ ರೋಹಿತ್ ತಲಾ 2 ರನ್ ಬಾರಿಸಿ ಟ್ರೆಂಟ್ ಬೌಲ್ಟ್ ಗೆ ವಿಕೆಟ್ ಒಪ್ಪಿಸಿದ್ದರು. ಇನ್ನು ಬಾಂಗ್ಲಾದೇಶ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಧವನ್ ಕೇವಲ 1 ರನ್ ಬಾರಿಸಿದರೆ, ರೋಹಿತ್ ಶರ್ಮಾ 42 ಎಸೆತಗಳನ್ನೆದುರಿಸಿ ಕೇವಲ 19 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಎರಡನೇ ಅಭ್ಯಾಸ ಪಂದ್ಯ ಮುಕ್ತಾಯದ ಬಳಿಕ ಆರಂಭಿಕರ ಪ್ರದರ್ಶನದ ಬಗ್ಗೆ ಮಾತನಾಡಿದ ಕೊಹ್ಲಿ, ಧವನ್ -ರೋಹಿತ್ ಇಬ್ಬರು ಅನುಭವಿ ಕ್ರಿಕೆಟಿಗರು. ಅವರಿಬ್ಬರು ಐಸಿಸಿ ಟೂರ್ನಿಗಳಲ್ಲಿ ಸ್ಟಾರ್ ಗಳಾಗಿ ಮಿಂಚಿದ್ದಾರೆ. ಐಪಿಎಲ್ ಬಳಿಕ ಏಕದಿನ ಪಂದ್ಯಗಳನ್ನಾಡುತ್ತಿರುವುದರಿಂದ ಏಕದಿನ ಮಾದರಿಗೆ ಹೊಂದಿಕೊಳ್ಳಲು ಸಮಸ್ಯೆ ಎದುರಿಸುತ್ತಿದ್ದಾರೆ. ಅವರ ವೈಫಲ್ಯವನ್ನು ಅರ್ಥಮಾಡಿಕೊಳ್ಳಬಲ್ಲೆ ಎಂದಿರುವ ಕೊಹ್ಲಿ, ತಂಡದ ಒಟ್ಟಾರೆ ಪ್ರದರ್ಶನದ ಬಗ್ಗೆ ತೃಪ್ತಿ ಇದೆ ಎಂದು ಹೇಳಿದ್ದಾರೆ. 

4ನೇ ಕ್ರಮಾಂಕಕ್ಕೆ ರಾಹುಲ್‌ ಫಿಕ್ಸ್‌!

ಇನ್ನು ಇದೇ ವೇಳೆ ಕೆ.ಎಲ್ ರಾಹುಲ್ ಹಾಗೂ ಧೋನಿ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ರಾಹುಲ್ ಉತ್ತಮ ರನ್ ಬಾರಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಧೋನಿ ಹಾಗೂ ಹಾರ್ದಿಕ್ ಪಾಂಡ್ಯ ಕೂಡಾ ಉತ್ತಮ ರನ್ ಬಾರಿಸಿದ್ದು ತಂಡದ ಬ್ಯಾಟಿಂಗ್ ಬಲವನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಕೊಹ್ಲಿ ಹೇಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಕೆ.ಎಲ್ ರಾಹುಲ್[108] ಹಾಗೂ ಮಹೇಂದ್ರ ಸಿಂಗ್ ಧೋನಿ[113] ಶತಕ ಸಿಡಿಸಿದ್ದರು.  

ಅಭ್ಯಾಸ ಪಂದ್ಯದಲ್ಲಿ ವಿಜಯ್ ಶಂಕರ್ ಫೇಲ್: ಟ್ರೋಲ್ ಮಾಡಿದ ಟ್ವಿಟರಿಗರು

2019ನೇ ಸಾಲಿನ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಮೇ.30ರಿಂದ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. 

ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ..