ವೈಜಾಗ್(ಫೆ.24): ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ವಿಶಾಖಪಟ್ಟಣಂನ ಡಾ. ವೈ.ಎಸ್ ರಾಜಶೇಖರ ರೆಡ್ಡಿ ಮೈದಾನ ಸಜ್ಜಾಗಿದೆ. ಟೂರ್ನಿಯಲ್ಲಿ ಶುಭಾರಂಭ ಮಾಡುವ ಮಾಡುವ ವಿಶ್ವಾಸದೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲು ಸಜ್ಜಾಗಿದೆ.

ಭಾರತ-ಆಸೀಸ್‌ ಮೊದಲ ಟಿ20 ಕದನಕ್ಕೆ ಕ್ಷಣಗಣನೆ ಆರಂಭ

ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಕಣಕ್ಕಿಳಿಯಲಿದ್ದಾರೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳನ್ನಾಡಿ ಆ ಬಳಿಕ ವಿಶ್ರಾಂತಿ ಪಡೆದಿದ್ದ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್’ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಇನ್ನು ಮಧ್ಯಮಕ್ರಮಾಂಕದಲ್ಲಿ ರಿಷಭ್ ಪಂತ್, ಎಂ.ಎಸ್ ಧೋನಿ ಕಣಕ್ಕಿಳಿಯಬಹುದು.

ಇನ್ನು ಆಲ್ರೌಂಡ್ ವಿಭಾಗದಲ್ಲಿ ವಿಜಯ್ ಶಂಕರ್ ಹಾಗೂ ಕೃನಾಲ್ ಪಾಂಡ್ಯ ಬಹುತೇಕ ಕಣಕ್ಕಿಳಿಯುವ ಸಾಧ್ಯತೆಯಿದೆ. ವೇಗದ ಬೌಲಿಂಗ್ ಸಾರಥ್ಯವನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದು, ಇವರಿಗೆ ಉಮೇಶ್ ಯಾದವ್ ಹಾಗೂ ಮಣಿಕಟ್ಟು ಸ್ಪಿನ್ನರ್ ಯುಜುವೇಂದ್ರ ಚಹಾಲ್ ಸಾಥ್ ನೀಡಲಿದ್ದಾರೆ. 

ಪಂದ್ಯ ಆರಂಭ: ಸಂಜೆ 7ಕ್ಕೆ, 
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್