ರಾಂಚಿ[ಮಾ.08]: ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಆರಂಭ ಪಡೆದಿದ್ದು, ಕೊನೆಗೂ ಮೊದಲ ವಿಕೆಟ್ ಕಬಳಿಸುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಆ್ಯರೋನ್ ಫಿಂಚ್ 93 ರನ್ ಬಾರಿಸಿ ಕುಲ್ದೀಪ್ ಯಾದವ್’ಗೆ ವಿಕೆಟ್ ಒಪ್ಪಿಸಿದ್ದಾರೆ.
ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್’ಗೆ ಆ್ಯರೋನ್ ಫಿಂಚ್-ಉಸ್ಮಾನ್ ಖ್ವಾಜಾ ಜೋಡಿ 193 ರನ್’ಗಳ ಜತೆಯಾಟವಾಡುವ ಮೂಲಕ ಭಾರತೀಯರನ್ನು ಇನ್ನಿಲ್ಲದಂತೆ ಕಾಡಿದರು. ಶತಕದತ್ತ ಮುನ್ನುಗ್ಗುತ್ತಿದ್ದ ಫಿಂಚ್ 99 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 93 ರನ್ ಬಾರಿಸಿ ಕಲ್ದೀಪ್ ಬೌಲಿಂಗ್’ನಲ್ಲಿ ಎಲ್’ಬಿ ಬಲೆಗೆ ಬಿದ್ದರು. 
ಈಗಾಗಲೇ ಮೊದಲೆರಡು ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆಸ್ಟ್ರೇಲಿಯಾ 34 ಓವರ್ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 204 ರನ್ ಬಾರಿಸಿದ್ದು, ಖ್ವಾಜಾ 94 ಹಾಗೂ ಮ್ಯಾಕ್ಸ್’ವೆಲ್ 9 ರನ್ ಬಾರಿಸಿ ಕ್ರೀಸ್’ನಲ್ಲಿದ್ದಾರೆ.