5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 2-0 ಹಿನ್ನಡೆ ಅನುಭವಿಸಿದೆ. ಈ ಪಂದ್ಯ ಗೆಲ್ಲಲೇಬೇಕೆಂಬ ಸಂಕಲ್ಪದೊಂದಿಗೆ ಕಣಕ್ಕಿಳಿದಿದೆ. ಕೇವಲ 29 ಎಸೆತಗಳಲ್ಲಿ ಇಂಗ್ಲೆಂಡ್ ತಂಡದ ಐವರು ಬ್ಯಾಟ್ಸ್’ಮನ್’ಗಳನ್ನು ಪೆವಿಲಿಯನ್’ಗೆ ಅಟ್ಟುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ.

ಬೆಂಗಳೂರು[ಆ.20]: ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಆಂಗ್ಲರಿಗೆ ಪ್ರಬಲ ತಿರುಗೇಟು ನೀಡುವಲ್ಲಿ ಸಫಲವಾಗಿದೆ. ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್’ನ ಎರಡನೇ ದಿನ ಹಾರ್ದಿಕ್ ಪಾಂಡ್ಯ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಕೇವಲ 161 ರನ್’ಗಳಿಗೆ ಸರ್ವಪತನ ಕಂಡಿತು.

5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 2-0 ಹಿನ್ನಡೆ ಅನುಭವಿಸಿದೆ. ಈ ಪಂದ್ಯ ಗೆಲ್ಲಲೇಬೇಕೆಂಬ ಸಂಕಲ್ಪದೊಂದಿಗೆ ಕಣಕ್ಕಿಳಿದಿದೆ. ಕೇವಲ 29 ಎಸೆತಗಳಲ್ಲಿ ಇಂಗ್ಲೆಂಡ್ ತಂಡದ ಐವರು ಬ್ಯಾಟ್ಸ್’ಮನ್’ಗಳನ್ನು ಪೆವಿಲಿಯನ್’ಗೆ ಅಟ್ಟುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್’ನಲ್ಲಿ ಚೊಚ್ಚಲ 5 ವಿಕೆಟ್ ಪಡೆದು ಸಂಭ್ರಮಿಸಿದರು. ಜತೆಗೆ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಬಿಗಿ ಹಿಡಿತ ಸಾಧಿಸಲು ಪ್ರಮುಖ ಪಾತ್ರವಹಿಸಿದರು. 

ಇದನ್ನು ಓದಿ: ಸ್ಟಂಪ್ ಔಟ್’ನಲ್ಲಿ ಗ್ಯಾರಿ ಕರ್ಸ್ಟನ್ ದಾಖಲೆ ಸರಿಗಟ್ಟಿದ ಗಬ್ಬರ್ ಸಿಂಗ್..!

ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ದಿಗ್ಗಜ ಕ್ರಿಕೆಟಿಗರು ಟ್ವೀಟ್ ಮಾಡಿದ್ದು ಹೀಗೆ....

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…