ನಾಟಿಂಗ್’ಹ್ಯಾಮ್[ಆ.20]: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್’ಮನ್ ಶಿಖರ್ ಧವನ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್’ನಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಭಾರತ ತಂಡದ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ದಾಖಲೆ ಸರಿಗಟ್ಟಿದ್ದಾರೆ.

ಹೌದು, ಆದಿಲ್ ರಶೀದ್ ಬೌಲಿಂಗ್’ನಲ್ಲಿ ಮುನ್ನುಗ್ಗಿ ಬಾರಿಸುವ ಯತ್ನದಲ್ಲಿ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್[44] ಸ್ಟಂಪ್ ಔಟ್ ಆಗಿ ಪೆವಿಲಿಯನ್ ಸೇರಿದರು. ಇದರೊಂದಿಗೆ ಇಂಗ್ಲೆಂಡ್ ನೆಲದಲ್ಲಿ 1994ರ ಬಳಿಕ ಸ್ಟಂಪ್ ಔಟ್ ಆದ ಪ್ರವಾಸಿ ತಂಡದ ಮೊದಲ ಆರಂಭಿಕ ಬ್ಯಾಟ್ಸ್’ಮನ್ ಎನ್ನುವ ಕೀರ್ತಿಗೆ ಧವನ್ ಪಾತ್ರರಾಗಿದ್ದರೆ. ಈ ಮೊದಲು 1994ರಲ್ಲಿ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟ್ಸ್’ಮನ್ ಗ್ಯಾರಿ ಕರ್ಸ್ಟನ್ ಇಂಗ್ಲೆಂಡ್ ಬೌಲರ್ ಗ್ರೇಮ್ ಹಿಕ್ ಬೌಲಿಂಗ್’ನಲ್ಲಿ ಸ್ಟಂಪ್ ಔಟ್ ಆಗಿದ್ದರು. 

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಮೊದಲ ಇನ್ನಿಂಗ್ಸ್’ನಲ್ಲಿ 329 ರನ್ ಬಾರಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ಹಾರ್ದಿಕ್ ಪಾಂಡ್ಯ ಮಾರಕ ದಾಳಿಗೆ ತತ್ತರಿಸಿ ಕೇವಲ 161 ರನ್’ಗಳಿಗೆ ಸರ್ವಪತನ ಕಾಣುವುದರೊಂದಿಗೆ 168 ರನ್’ಗಳ ಹಿನ್ನಡೆ ಅನುಭವಿಸಿತು. ಆನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಎರಡನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿದ್ದು ಒಟ್ಟು 292 ರನ್’ಗಳ ಮುನ್ನಡೆ ಸಾಧಿಸಿದೆ.