ಕೋಲ್ಕತಾ(ನ.03): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಚುಟುಕು ಸಮರಕ್ಕೆ ವೇದಿಕೆ ರೆಡಿಯಾಗಿದೆ. ನ.04 ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಟೀಂ ಇಂಡಿಯಾದ ಇತ್ತೀಚಿನ ಸಂಪ್ರದಾಯದ ಪ್ರಕಾರ 12 ಮಂದಿ ಸದಸ್ಯರ ತಂಡವನ್ನ ಬಿಸಿಸಿಐ ಪ್ರಕಟಿಸಿದೆ.

 

 

ರೋಹಿತ್ ಶರ್ಮಾ ನಾಯಕತ್ವದ ತಂಡದಲ್ಲಿ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ ಇಬ್ಬರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಬದಲು ತಂಡಕ್ಕೆ ಆಯ್ಕೆಯಾದ ರಿಷಬ್ ಪಂತ್ ಸ್ಥಾನ ಪಡೆದಿದ್ದಾರೆ. ಇನ್ನು ಆಲ್ರೌಂಡರ್ ಕೋಟಾದಲ್ಲಿ ಹಾರ್ದಿಕ್ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ ಕೂಡ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಯಜುವೇಂದ್ರ ಚಹಾಲ್