Asianet Suvarna News Asianet Suvarna News

ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ವಿಂಡೀಸ್ ವಿಕೆಟ್ ಪತನ?

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಅಂತಿಮ ಹಂತದಲ್ಲಿದೆ. ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಇದೀಗ ಅಂತಿಮ ಏಕದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. 5ನೇ ಏಕದಿನ ಪಂದ್ಯಕ್ಕೆ ತಯಾರಿ ಆರಂಭಿಸಿರುವ ವಿಂಡೀಸ್ ತಂಡಕ್ಕೆ ಆಘಾತ ಎದುರಾಗಿದೆ.

Ind Vs WI Injured Ashley Nurse doubtful for the final OD against India
Author
Bengaluru, First Published Oct 30, 2018, 4:38 PM IST
  • Facebook
  • Twitter
  • Whatsapp

ತಿರುವನಂತಪುರಂ(ಅ.30): ಭಾರತ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿರುವ ವೆಸ್ಟ್ ಇಂಡೀಸ್ ಅಂತಿಮ ಪಂದ್ಯ ಗೆದ್ದು ಸರಣಿ ಸಮಬಲ ಮಾಡೋ ಲೆಕ್ಕಾಚಾರದಲ್ಲಿದೆ. ಆದರೆ 5ನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೂ ಮುನ್ನವೇ ವಿಂಡೀಸ್ ವಿಕೆಟ್ ಪತನಗೊಳ್ಳೋ ಸಾಧ್ಯತೆ ಇದೆ.

4ನೇ ಏಕದಿನ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಬಳಲಿದ ಆಶ್ಲೆ ನರ್ಸ್ ಅಂತಿಮ ಪಂದ್ಯಕ್ಕೆ ಅಲಭ್ಯರಾಗೋ ಸಾಧ್ಯತೆ ಇದೆ. ಭುಜದ ನೋವಿನಿಂದ ಬಳಲುತ್ತಿರುವ ನರ್ಸ್, ವಿಶ್ರಾಂತಿಗೆ ಜಾರಿದ್ದಾರೆ. ಹೀಗಾಗಿ ನವೆಂಬರ್ 1 ರಂದು ನಡೆಯಲಿರುವ ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿಯೋ ಸಾಧ್ಯತೆ ಹೆಚ್ಚಿದೆ.

ಮೊದಲ ಹಾಗೂ 4ನೇ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದರೆ, 3ನೇ ಏಕದಿನ ಪಂದ್ಯದಲ್ಲಿ ವಿಂಡೀಸ್ ಗೆಲುವಿನ ನಗೆ ಬೀರಿತ್ತು. ಇನ್ನು 2ನೇ ಏಕದಿನ ಪಂದ್ಯ ಟೈನಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ವಿಂಡೀಸ್ ಸರಣಿ ಉಳಿಸಿಕೊಳ್ಳಲು ಅಂತಿಮ ಏಕದಿನ ಪಂದ್ಯವನ್ನ ಗೆಲ್ಲಲಬೇಕಿದೆ.

Follow Us:
Download App:
  • android
  • ios