Asianet Suvarna News Asianet Suvarna News

ಈ ನಾಲ್ವರಲ್ಲಿ ಯಾರು ಬೆಸ್ಟ್..? ಇವರು ವಿಂಡೀಸ್ ಟೆಸ್ಟ್ ಆಡ್ತಾರಾ..?

Oct 3, 2018, 12:05 PM IST

ಬೆಂಗಳೂರು[ಅ.03]: ವೆಸ್ಟ್’ಇಂಡಿಸ್ ಎದುರಿನ ಟೆಸ್ಟ್ ಸರಣಿ ಆರಂಭಕ್ಕೆ ಇನ್ನೊಂದೇ ದಿನ ಬಾಕಿಯಿದ್ದ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಲು ಟೀಂ ಇಂಡಿಯಾದ ನಾಲ್ವರು ಕ್ರಿಕೆಟಿಗರು ತುದಿಗಾಲಿನಲ್ಲಿ ನಿಂತಿದ್ದಾರೆ.

ದೇಶಿ ಕ್ರಿಕೆಟ್’ನಲ್ಲಿ ಮಿಂಚುತ್ತಿರುವ ಕನ್ನಡದ ಪ್ರತಿಭೆ ಮಯಾಂಕ್ ಅಗರ್’ವಾಲ್, ಅಂಡರ್ 19 ವಿಶ್ವಕಪ್ ಗೆಲ್ಲಿಸಿಕೊಟ್ಟ ಮುಂಬೈ ಕ್ರಿಕೆಟಿಗ ಪೃಥ್ವಿ ಶಾ ಕೂಡಾ ಭಾರತ ಪರ ಜೆರ್ಸಿ ತೊಡಲು ಸಜ್ಜಾಗಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಶಾರ್ದೂಲ್ ಠಾಕೂರ್ ಕೂಡಾ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಎದುರು ನೋಡುತ್ತಿದ್ದಾರೆ. ಆದರೆ ಆಡುವ ಹನ್ನೊಂದರ ಬಳಗದಲ್ಲಿ ಯಾರಿಗೆ ಸ್ಥಾನ ಸಿಗುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.