ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್’ಮನ್ ಕೆ.ಎಲ್ ರಾಹುಲ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಮತ್ತೊಮ್ಮೆ ವಿಫಲವಾಗಿದ್ದಾರೆ. ವೆಸ್ಟ್ ವಿಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೇವಲ 4 ರನ್ ಬಾರಿಸಿ ಕ್ಲೀನ್ ಬೌಲ್ಡ್ ಆಗುವ ಮೂಲಕ ರಾಹುಲ್ ಆಯ್ಕೆಗಾರರ ವಿಶ್ವಾಸವನ್ನು ಮತ್ತೊಮ್ಮೆ ಹುಸಿ ಮಾಡಿದರು.

ಹೈದರಾಬಾದ್[ಅ.13]: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್’ಮನ್ ಕೆ.ಎಲ್ ರಾಹುಲ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ಮತ್ತೊಮ್ಮೆ ವಿಫಲವಾಗಿದ್ದಾರೆ. ವೆಸ್ಟ್ ವಿಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೇವಲ 4 ರನ್ ಬಾರಿಸಿ ಕ್ಲೀನ್ ಬೌಲ್ಡ್ ಆಗುವ ಮೂಲಕ ರಾಹುಲ್ ಆಯ್ಕೆಗಾರರ ವಿಶ್ವಾಸವನ್ನು ಮತ್ತೊಮ್ಮೆ ಹುಸಿ ಮಾಡಿದರು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೊನೆಯ ಪಂದ್ಯ ಹೊರತುಪಡಿಸಿ ಉಳಿದೆಲ್ಲಾ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ತೋರಿದ್ದ ರಾಹುಲ್, ಟೀಂ ಇಂಡಿಯಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ತವರಿನಲ್ಲಾದರೂ ರಾಹುಲ್ ಫಾರ್ಮ್’ಗೆ ಮರಳಬಹುದು, ರನ್ ಕಲೆಹಾಕಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಹುಲ್ ಹಳೇ ಚಾಳಿಯನ್ನೇ ಮುಂದುವರೆಸಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಸೊನ್ನೆ ಸುತ್ತಿದ್ದ ರಾಹುಲ್, ಎರಡನೇ ಟೆಸ್ಟ್’ನಲ್ಲಿ ಕೇವಲ 4 ರನ್ ಬಾರಿಸಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇದೇ ರೀತಿಯ ಪ್ರದರ್ಶನ ಮುಂದುವರೆದರೆ ರಾಹುಲ್ ಟೆಸ್ಟ್ ತಂಡದಿಂದ ಹೊರಬೀಳಬಹುದು. ಯಾಕೆಂದರೆ ಮತ್ತೋರ್ವ ಕನ್ನಡಿಗ ಮಯಾಂಕ್ ಅಗರ್’ವಾಲ್ ಅವಕಾಶಕ್ಕಾಗಿ ಕಾದುಕುಳಿತಿದ್ದಾರೆ. ಜತೆಗೆ ಮುರುಳಿ ವಿಜಯ್ ಕೌಂಟಿ ಕ್ರಿಕೆಟ್’ನಲ್ಲಿ ರನ್ ಹೊಳೆ ಹರಿಸುತ್ತಿದ್ದಾರೆ. ಆಸೀಸ್ ಪ್ರವಾಸಕ್ಕೆ ಧವನ್ ಕೂಡಾ ಬಹುತೇಕ ಕಮ್’ಬ್ಯಾಕ್ ಮಾಡುವುದರಿಂದ ರಾಹುಲ್ ಅವಕಾಶಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ಎದುರಾದರೂ ಅಚ್ಚರಿ ಪಡಬೇಕಿಲ್ಲ.

ರಾಹುಲ್ ಕಳಪೆ ಪ್ರದರ್ಶನದ ಬಗ್ಗೆ ಟ್ವಿಟರಿಗರು ಅಸಮಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಏನಂದ್ರು ನೀವೇ ನೋಡಿ...

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…