ಈ ಹಿನ್ನೆಲೆಯಲ್ಲಿ ಭಾರತ, ಇಂದು ನಡೆಯಲಿರುವ ಪಂದ್ಯದಲ್ಲಿ ಗೆದ್ದರಷ್ಟೇ ಅಗ್ರಸ್ಥಾನಕ್ಕೇರಲಿದೆ ಇಲ್ಲವಾದರೆ ಎರಡನೇ ಸ್ಥಾನದಲ್ಲೇ ಉಳಿಯಲಿದೆ.

ನಾಗ್ಪುರ(ಅ.01): ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ಸೋಲುವ ಮೂಲಕ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಕುಸಿದಿತ್ತು. ಇಂದು ನಡೆಯಲಿರುವ ಪಂದ್ಯದಲ್ಲಿ ಆಸೀಸ್ ಎದುರು ಭಾರತ ಜಯಗಳಿಸಿದರೆ ಮತ್ತೆ ಅಗ್ರಸ್ಥಾನಕ್ಕೇರಲಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮೊದಲ 3 ಪಂದ್ಯಗಳನ್ನು ಜಯಿಸುವ ಮೂಲಕ ಭಾರತ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿತ್ತು. ಆದರೆ, 4ನೇ ಪಂದ್ಯದ ಬಳಿಕ ರೇಟಿಂಗ್‌'ನಲ್ಲಿ ಕೊಂಚ ಇಳಿಕೆಯಾಗಿದ್ದು, 118.93 ಅಂಕಗಳಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

ಈ ಹಿನ್ನೆಲೆಯಲ್ಲಿ ಭಾರತ, ಇಂದು ನಡೆಯಲಿರುವ ಪಂದ್ಯದಲ್ಲಿ ಗೆದ್ದರಷ್ಟೇ ಅಗ್ರಸ್ಥಾನಕ್ಕೇರಲಿದೆ ಇಲ್ಲವಾದರೆ ಎರಡನೇ ಸ್ಥಾನದಲ್ಲೇ ಉಳಿಯಲಿದೆ.