ಭಾರತ ವಿರುದ್ಧದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಆರಂಭಿಕ ಮೇಲುಗೈ ಸಾಧಿಸಿದೆ. ಪ್ರಶಸ್ತಿಗಾಗಿ ಹೋರಾಟ ನಡೆಸುತ್ತಿರುವ ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ಹೇಗಿದೆ? ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.
ದುಬೈ(ಸೆ.28): ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಇಳಿದಿರುವ ಬಾಂಗ್ಲಾದೇಶ ದಿಟ್ಟ ಹೋರಾಟ ನೀಡುತ್ತಿದೆ. ಈ ಮೂಲಕ ಭಾರತದ ಆರಂಭಿಕ ಲೆಕ್ಕಾಚಾರ ಉಲ್ಟಾ ಆಗಿದೆ.
ಬಾಂಗ್ಲಾದೇಶ ತಂಡವನ್ನ ಬ್ಯಾಟಿಂಗ್ ಆಹ್ವಾನಿಸಿ ಆರಂಭಿಕ ಆಘಾತ ನೀಡಲು ಸಜ್ಜಾಗಿದ್ದ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಬಾಂಗ್ಲಾ ಆರಂಭಿಕರಾದ ಲಿಟ್ಟನ್ ದಾಸ್ ಹಾಗೂ ಮೆಹದಿ ಹಸನ್ ಅರ್ಧಶತಕದ ಜೊತೆಯಾಟ ನೀಡಿದ್ದಾರೆ.ಸದ್ಯ ಬಾಂಗ್ಲಾದೇಶ ವಿಕೆಟ್ ನಷ್ಟವಿಲ್ಲದೆ 59 ರನ್ ಸಿಡಿಸಿದೆ.
ಫೈನಲ್ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಬದಲಾವಣೆ ಮಾಡಲಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ಶಿಖರ್ ಧವನ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಯುಜುವೆಂದ್ರ ಚೆಹಾಲ್ ಕಮ್ ಬ್ಯಾಕ್ ಮಾಡಿದ್ದಾರೆ.
