ಆಸೀಸ್ ಎದುರು ಫೆ. 23ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.
ನವದೆಹಲಿ(ಜ.30): ಮುಂದಿನ ತಿಂಗಳಿಂದ ಆಸ್ಟ್ರೇಲಿಯಾ 4 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಕೈಗೊಳ್ಳಲಿದೆ.
ಇಲ್ಲಿಗೆ ಆಗಮಿಸಲಿರುವ ಆಸ್ಟ್ರೇಲಿಯಾ ತಂಡವನ್ನು ಭಾರತ ಯಾವುದೇ ಕಾರಣಕ್ಕೂ ಲಘುವಾಗಿ ಪರಿಗಣಿಸುವುದಿಲ್ಲ ಎಂದು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ನಮ್ಮ ತಂಡ ಈಗಾಗಲೇ ಆಸೀಸ್ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದೆ. ತವರಿನಲ್ಲಿ ಕೊಹ್ಲಿ ನೇತೃತ್ವದ ಯುವ ಪಡೆ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಆಸೀಸ್ ಎದುರು ಫೆ. 23ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಕೆಲ ದಿನಗಳ ಹಿಂದಷ್ಟೇ ಭಾರತ ತಂಡ ಇಂಗ್ಲೆಂಡ್ ವಿರುದ್ಧ 4-0ಯಿಂದ ಗೆಲುವು ಸಾಧಿಸಿತ್ತು.
ಇತ್ತ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಯಲ್ಲಿ ಪರಾಭವ ಹೊಂದಿತ್ತು. ಆ ನಂತರ ನಡೆದ ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ಜಯ ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
