ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದ ಟೀಂ ಇಂಡಿಯಾ

India claim second spot in ICC T20 rankings, Pakistan remain on top
Highlights

ಐರ್ಲೆಂಡ್ ವಿರುದ್ಧದ ಟಿ20 ಸರಣಿ ಗೆದ್ದ ಟೀಂ ಇಂಡಿಯಾ ರ‍್ಯಾಂಕಿಂಗ್‌ನಲ್ಲಿಬಡ್ತಿ ಪಡೆದಿದೆ. 3ನೇ ಸ್ಥಾನದಲ್ಲಿದ್ದ ಭಾರತ ತಂಡ ಇದೀಗ 2ನೇ ಸ್ಥಾನಕ್ಕೆ ಜಿಗಿದಿದೆ. ಆದರೆ ಪಾಕಿಸ್ತಾನ ಮೊದಲ ಸ್ಥಾನದಲ್ಲಿ ವಿರಾಜಮಾನವಾಗಿದೆ. ಐಸಿಸಿ ರ‍್ಯಾಂಕಿಂಗ್‌ನಲ್ಲಿ ಡಿಟೇಲ್ಸ್ ಇಲ್ಲಿದೆ.

ದುಬೈ(ಜೂ.30): ಐಸಿಸಿ ನೂತನ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಗೊಳಿಸಿದೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿ ಗೆದ್ದ ಭಾರತ, ರ‍್ಯಾಂಕಿಂಗ್‌ನಲ್ಲೂ ಏರಿಕೆ ಕಂಡಿದೆ. 3ನೇ ಸ್ಥಾನದಲ್ಲಿದ್ದ ಭಾರತ ತಂಡ ಇದೀಗ ಟಿ20 ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೇರಿದೆ.

ಐರ್ಲೆಂಡ್ ಪ್ರವಾಸ ಕೈಗೊಂಡಾಗ ಭಾರತ ಟಿ20 ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನ ಅಲಂಕರಿಸಿತ್ತು. ಆದರೆ ಐರ್ಲೆಂಡ್ ವಿರುದ್ಧದ ಸರಣಿಯನ್ನ ಕ್ಲೀನ್ ಸ್ಪೀಪ್ ಮಾಡಿದ ಟೀಂ ಇಂಡಿಯಾ ಓಟ್ಟು 123 ರೇಟಿಂಗ್ ಪಡೆದುಕೊಳ್ಳೋ ಮೂಲಕ 2ನೇ ಸ್ಥಾನಕ್ಕೆ ಜಿಗಿದಿದೆ. 

ಮುಂಬರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಕ್ಲೀನ್ ಸ್ವೀಪ್ ಗೆಲುವು ಸಾಧಿಸಿದರೆ, ಭಾರತ ರೇಟಿಂಗ್ ಹೆಚ್ಚಿಸಿಕೊಳ್ಳಲಿದೆ. ಜುಲೈ 3 ರಿಂದ ಭಾರತ, ಇಂಗ್ಲೆಂಡ್ ವಿರುದ್ಧ 3 ಟಿ20 ಪಂದ್ಯ ಆಡಲಿದೆ.

ಟಿ20 ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನ ಮೊದಲ ಸ್ಥಾನ ಅಲಂಕರಿಸಿದೆ. ಇತ್ತೀಚಿನ ಚುಟುಕು ಪಂದ್ಯಗಳಲ್ಲಿ ಪಾಕ್ ತಂಡ ಅದ್ಬುತ ಪ್ರದರ್ಶನ ನೀಡಿದೆ. ಈ ಮೂಲಕ 131 ರೇಟಿಂಗ್ ಪಾಯಿಂಟ್ಸ್ ಪಡೆದುಕೊಳ್ಳೋ ಮೂಲಕ ಮೊದಲ ಸ್ಥಾನ ಅಲಂಕರಿಸಿದೆ.

loader