ವಿರಾಟ್ ಕೊಹ್ಲಿ ಭರ್ಜರಿ ಶತಕ- 274 ರನ್‌ಗೆ ಟೀಂ ಇಂಡಿಯಾ ಆಲೌಟ್

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 2, Aug 2018, 10:47 PM IST
India england test team india allout for 274 runs
Highlights

ಇಂಗ್ಲೆಂಡ್ ತಂಡವನ್ನ 287 ರನ್‌ಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ, ಆಂಗ್ಲರ ದಾಳಿಗೆ ತತ್ತರಿಸಿತು. ಆದರೆ ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನೀಡೋ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ದಿಟ್ಟ ಹೋರಾಟ ನೀಡಿತು. ಕೊಹ್ಲಿ ಶತಕದ ಹೊರತಾಗಿಯೂ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ  13 ರನ್ ಹಿನ್ನಡೆ ಅನುಭವಿಸಿದೆ.

ಎಡ್ಜ್‌ಬಾಸ್ಟನ್(ಆ.02):ಇಂಗ್ಲೆಂಡ್ ವಿರುದ್ಧ ಮೊದನೇ ಟೆಸ್ಟ್ ಪಂದ್ಯದ ದ್ವಿತೀಯ ದಿನದ ಆರಂಭಿಕ 2 ಸೆಶನ್‌ಗಳಲ್ಲಿ ಹಿನ್ನಡೆ ಅನುಭವಿಸಿದ್ದ ಭಾರತ ಅಂತಿಮ ಸೆಶನ್‌ನಲ್ಲಿ ಇಂಗ್ಲೆಂಡ್ ಲೆಕ್ಕಾಚಾರವನ್ನ ಬುಡಮೇಲು ಮಾಡಿತು. ಅಲ್ಪಮೊತ್ತಕ್ಕೆ ಆಲೌಟ್ ಆಗೋ ಭೀತಿ ಎದುರಿಸಿದ್ದ ಭಾರತ,  ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕದ ನೆರವಿನಿಂದ ಮೊದಲ ಇನ್ನಿಂಗ್ಸ್‌ನಲ್ಲಿ 274 ರನ್ ಸಿಡಿಸಿತು. 

 

 

ಇನ್ನಿಂಗ್ಸ್ ಆರಂಭದಲ್ಲಿ ಶಿಖರ್ ಧವನ್ ಹಾಗೂ ಮುರಳಿ ವಿಜಯ್ ಡಿಸೆಂಟ್ ಒಪನಿಂಗ್ ನೀಡಿದರು. ಇವರಿಬ್ಬರ ಜೊತೆಯಾಟ 50 ರನ್‌ಗೆ ಅಂತ್ಯವಾಯಿತು. ವಿಜಯ್ 20, ಧವನ್ 26 ರನ್ ಸಿಡಿಸಿ ಪೆವಿಲಿಯನ್ ಸೇರಿದರು. ಕೆಎಲ್ ರಾಹುಲ್, ಅಜಿಂಕ್ಯ ರಹಾನೆ ಹಾಗೂ ದಿನೇಶ್ ಕಾರ್ತಿಕ್ ಹೋರಾಟ ನೀಡಲೇ ಇಲ್ಲ.

ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನೀಡೋ ಮೂಲಕ ಟೀಂ ಇಂಡಿಯಾ ಅಭಿಮಾನಿಗಳ ಆತಂಕ ದೂರ ಮಾಡಿದರು. ಆದರೆ ಕೊಹ್ಲಿಗೆ ಯಾರಿಂದಲೂ ಉತ್ತಮ  ಸಾಥ್ ಸಿಗಲಿಲ್ಲ. ಹಾರ್ದಿಕ್ ಪಾಂಡ್ಯ 22 ರನ್ ಸಿಡಿಸಿ ಔಟಾದರು. ಇನ್ನು ರವಿಚಂದ್ರನ್ ಅಶ್ವಿನ್ 10 ರನ್‌ಗೆ ಸುಸ್ತಾದರು. 

ಮೊಹಮ್ಮದ್ ಶಮಿ ಕೂಡ ಬಂದ ಹಾಗೆ ಪೆವಿಲಿಯನ್ ಸೇರಿಕೊಂಡರು. ಆದರೆ ದಿಟ್ಟ ಹೋರಾಟ ನೀಡಿದ ವಿರಾಟ್ ಕೊಹ್ಲಿ ಭರ್ಜರಿ ಶತಕ  ಸಿಡಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 22ನೇ ಶತಕ ದಾಖಲಿಸಿ ಇಂಗ್ಲೆಂಡ್ ತಂಡಕ್ಕೆ ತಿರುಗೇಟು ನೀಡಿದರು.

ಇಂಗ್ಲೆಂಡ್ ನೆಲದಲ್ಲಿ ಮೊದಲ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಮತ್ತಷ್ಟು ಆಕ್ರಮಣಕಾರಿ ಆಟಕ್ಕೆ ಮುಂದಾದರು. 149 ರನ್ ಸಿಡಿಸಿ ಮುನ್ನಗ್ಗುತ್ತಿದ್ದ ವಿರಾಟ್ ಕೊಹ್ಲಿ, ಆದಿಲ್ ರಶೀದ್‌ಗೆ ವಿಕೆಟ್ ಒಪ್ಪಿಸಿದರು.  ಈ ಮೂಲಕ ಭಾರತ 274ರನ್‌ಗೆ ಆಲೌಟ್ ಆಯಿತು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 13 ರನ್ ಹಿನ್ನಡೆ ಅನುಭವಿಸಿತು. 

loader