ಭಾರತದ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನ ದೇಶದೆಲ್ಲಡೆ ಸಂಭ್ರಮದಿಂದ ಆಚರಿಸಲಾಯಿತು. ಇಂಗ್ಲೆಂಡ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಿತು. ಇಲ್ಲಿದೆ ಟೀಂ ಇಂಡಿಯಾ ಕ್ರಿಕೆಟಿಗರ ಸ್ವಾತಂತ್ರ್ಯ ದಿನಾಚರಣೆ

ಲಂಡನ್(ಆ.15): ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಲಂಡನ್‌ನಲ್ಲಿ ಭಾರತದ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಿದೆ. ಬೆಳಗ್ಗೆ ಲಂಡನ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ರವಿ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಶೇಷ ಕ್ಷಣಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಸಾಕ್ಷಿಯಾದರು. ಧ್ವಜವಂದನೆ ಬಳಿಕ ನಾಯಕ ವಿರಾಟ್ ಕೊಹ್ಲಿ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಹೇಳಿದರು. 

ಟೀಂ ಇಂಡಿಯಾ ಸ್ವಾತಂತ್ರ್ಯ ದಿನಾಚರಣೆಯ ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ:

ಇಂಗ್ಲೆಂಡ್ ವಿರುದ್ದದ ಆರಂಭಿಕ 2 ಟೆಸ್ಟ್ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ ಇದೀಗ 3ನೇ ಟೆಸ್ಟ್ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ. ಆಗಸ್ಟ್ 18 ರಿಂದ ಟ್ರೆಂಟ್‌ಬ್ರಿಡ್ಜ್‌ನಲ್ಲಿ ಮಹತ್ವದ ಪಂದ್ಯ ನಡೆಯಲಿದೆ. ಇದು ಭಾರತಕ್ಕೆ ಮಾಡು ಇಲ್ಲವೆ ಮಡಿ ಪಂದ್ಯ.