5ನೇ ರ‍್ಯಾಂಕಿಂಗ್ ಪಡೆದ ಹಾಕಿ ಟೀಂ ಇಂಡಿಯಾ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 8, Aug 2018, 11:51 AM IST
India men's hockey team 5th in FIH rankings
Highlights

ಚಾಂಪಿಯನ್ಸ್ ಟ್ರೋಫಿ ಫೈನಲ್ಸ್’ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾದಲ್ಲಿ ವಿರುದ್ಧ ಪೆನಾಲ್ಟಿ ಶೂಟೌಟ್’ನಲ್ಲಿ ಮುಗ್ಗರಿಸಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆಸ್ಟ್ರೇಲಿಯಾ, ಅರ್ಜೆಂಟೀನಾ ಹಾಗೂ ಬೆಲ್ಜಿಯಂ ತಂಡಗಳು ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ. 

ನವದೆಹಲಿ[ಆ.08]: ಮಂಗಳವಾರ ಬಿಡುಗಡೆಗೊಂಡಿರುವ ಎಫ್‌ಐಎಚ್ ನೂತನ ಹಾಕಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಪುರುಷರ ತಂಡ 5ನೇ ಸ್ಥಾನಕ್ಕೇರಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ಒಂದು ಸ್ಥಾನ ಏರಿಕೆ ಕಂಡಿದೆ. ಗರಿಷ್ಠ  ರ‍್ಯಾಂಕಿಂಗ್ ಹೊಂದಿರುವ ಏಷ್ಯಾ ತಂಡ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ.

ಚಾಂಪಿಯನ್ಸ್ ಟ್ರೋಫಿ ಫೈನಲ್ಸ್’ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾದಲ್ಲಿ ವಿರುದ್ಧ ಪೆನಾಲ್ಟಿ ಶೂಟೌಟ್’ನಲ್ಲಿ ಮುಗ್ಗರಿಸಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆಸ್ಟ್ರೇಲಿಯಾ, ಅರ್ಜೆಂಟೀನಾ ಹಾಗೂ ಬೆಲ್ಜಿಯಂ ತಂಡಗಳು ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ. 

ಇದನ್ನು ಓದಿ: ಹಾಕಿ ವಿಶ್ವಕಪ್: ಟೂರ್ನಿಯಿಂದ ಹೊರಬಿದ್ದ ಭಾರತ

ಇದೇ ವೇಳೆ ವಿಶ್ವಕಪ್‌ನ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡ, ಒಂದು ಸ್ಥಾನ ಏರಿಕೆ ಕಂಡು 9ನೇ ಸ್ಥಾನ ಪಡೆದುಕೊಂಡಿದೆ. ಹಾಕಿ ವಿಶ್ವಕಪ್’ನಲ್ಲಿ ಮಹಿಳೆಯರ ತಂಡ ಐರ್ಲೆಂಡ್ ವಿರುದ್ಧ ಮುಗ್ಗರಿಸಿತ್ತು. 

loader