ಐದು ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾವನ್ನು ನಾಯಕ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ.
ಮುಂಬೈ(ನ.02): ಇದೇ ತಿಂಗಳು 09 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು, ದೆಹಲಿ ಅನುಭವಿ ಆಟಗಾರ ಗೌತಮ್ ಗಂಭೀರ್ ಹಾಗೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಎಂಎಸ್'ಕೆ ಪ್ರಸಾದ್ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದ್ದು, ನ್ಯೂಜಿಲ್ಯಾಂಡ್ ಸರಣಿ ವೇಳೆ ಗಾಯದ ಸಮಸ್ಯಯಿಂದ ಬಳಲಿದ್ದ ಇಶಾಂತ್ ಶರ್ಮಾ ತಂಡಕ್ಕೆ ಕಮ್'ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ರಣಜಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದ ರಾಜ್ಯದ ಪ್ರತಿಭಾನ್ವಿತ ಆಟಗಾರ ಕರುಣ್ ನಾಯರ್, ಹಾಗೂ ಹಿರಿಯ ಅನುಭವಿ ಆಟಗಾರ ಗೌತಮ್ ಗಂಭೀರ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ಐದು ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾವನ್ನು ನಾಯಕ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ.
ಟೀಂ ಇಂಡಿಯಾ ತಂಡ ಇಂತಿದೆ:
ವಿರಾಟ್ ಕೊಹ್ಲಿ(ನಾಯಕ), ಗೌತಮ್ ಗಂಭೀರ್, ಮುರಳಿ ವಿಜಯ್, ಚೇತೇಶ್ವರ್ ಪೂಜಾರ, ಅಜಿಂಕ್ಯಾ ರಹಾನೆ, ಕರುಣ್ ನಾಯರ್
ಜಯಂತ್ ಯಾದವ್, ಅಮಿತ್ ಮಿಶ್ರಾ, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಆರ್. ಅಶ್ವಿನ್, ವೃದ್ಧಿಮಾನ್ ಸಾಹ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ
