ಆಸೀಸ್'ಗಿಂತ ಕೇವಲ ಒಂದು ಅಂಕ(99) ಹಿನ್ನಡೆಯೊಂದಿಗೆ ಇಂಗ್ಲೆಂಡ್ 4ನೇ ಸ್ಥಾನದಲ್ಲಿದೆ.

ದುಬೈ(ಮೇ.18): ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ವಾರ್ಷಿಕ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆಗೊಳಿಸಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಗ್ರಸ್ಥಾನ ಉಳಿಸಿಕೊಂಡಿದೆ.

123 ಅಂಕಗಳಿಕೆಯೊಂದಿಗೆ ಭಾರತ ಮೊದಲ ಸ್ಥಾನದಲ್ಲಿದ್ದರೆ, 117 ಅಂಕಗಳಿಸಿರುವ ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಇನ್ನು 100 ಅಂಕ ಗಳಿಸಿರುವ ಆಸ್ಟ್ರೇಲಿಯಾ 3ನೇ ಸ್ಥಾನ ಪಡೆದುಕೊಂಡಿದೆ.

ಆಸೀಸ್'ಗಿಂತ ಕೇವಲ ಒಂದು ಅಂಕ(99) ಹಿನ್ನಡೆಯೊಂದಿಗೆ ಇಂಗ್ಲೆಂಡ್ 4ನೇ ಸ್ಥಾನದಲ್ಲಿದೆ. ಇನ್ನುಳಿದಂತೆ ಪಾಕಿಸ್ತಾನ 5, ನ್ಯೂಜಿಲೆಂಡ್ 6, ಶ್ರೀಲಂಕಾ 7ನೇ ಸ್ಥಾನದಲ್ಲಿವೆ.

ವೆಸ್ಟ್‌ಇಂಡೀಸ್, ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ಕ್ರಮವಾಗಿ ಕೊನೆಯ ಮೂರನೇ ಸ್ಥಾನ ಗಳಿಸಿವೆ.