ಆಫ್ರಿಕಾ ಸರಣಿ ಬಳಿಕ ಟೀಂ ಇಂಡಿಯಾ ಲಂಕಾ ಪ್ರವಾಸ

First Published 19, Jan 2018, 2:02 PM IST
India Set to Play Sri Lanka Again This Time in T20I Tri Series With Bangladesh
Highlights

ಭಾರತ, ಲಂಕಾ ಜತೆಗೆ ಬಾಂಗ್ಲಾದೇಶ ಸಹ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಮಾ.6ರಿಂದ ಸರಣಿ ಆರಂಭಗೊಳ್ಳಲಿದೆ. ಲಂಕಾದ 70ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಈ ಸರಣಿ ಆಯೋಜಿಸಲಾಗಿದ್ದು, ನಿದಹಾಸ್ ಟ್ರೋಫಿ ಎಂದು ಹೆಸರಿಡಲಾಗಿದೆ.

ನವದೆಹಲಿ(ಜ.19): ಫೆ.24ರಂದು ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಅಂತ್ಯಗೊಳ್ಳಲಿದ್ದು, ಇದರ ಬೆನ್ನಲ್ಲೇ ಟಿ20 ತ್ರಿಕೋನ ಸರಣಿಯನ್ನಾಡಲು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ.

ಭಾರತ, ಲಂಕಾ ಜತೆಗೆ ಬಾಂಗ್ಲಾದೇಶ ಸಹ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಮಾ.6ರಿಂದ ಸರಣಿ ಆರಂಭಗೊಳ್ಳಲಿದೆ. ಲಂಕಾದ 70ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಈ ಸರಣಿ ಆಯೋಜಿಸಲಾಗಿದ್ದು, ನಿದಹಾಸ್ ಟ್ರೋಫಿ ಎಂದು ಹೆಸರಿಡಲಾಗಿದೆ.

ಟೂರ್ನಿಯಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿದ್ದು, ಮಾ.18ರಂದು ಫೈನಲ್ ಪಂದ್ಯ ನಡೆಯಲಿದೆ. ಮಾ.6ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಭಾರತ, ಶ್ರೀಲಂಕಾ ಸವಾಲನ್ನು ಎದುರಿಸಲಿದೆ.

loader