ಆ. 7ರಿಂದ 13ವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ರಾಂಚಿ, ಗುವಾಹಟಿ ಮತ್ತು ಹೈದರಾಬಾದ್'ನಲ್ಲಿ ಪಂದ್ಯಗಳು ನಡೆಯಲಿವೆ. ಏಕದಿನ ಕ್ರಿಕೆಟ್ ಸರಣಿಯನ್ನು 4-1ರಿಂದ ಜಯಿಸಿ ವಿಶ್ವದ ನಂ.1 ಪಟ್ಟಕ್ಕೇರಿರುವ ಭಾರತ ತಂಡ ಟಿ20 ಸರಣಿಯಲ್ಲೂ ಕಾಂಗರೂಗಳನ್ನು ಕಟ್ಟಿಹಾಕಲು ಸಜ್ಜಾಗಿದೆ.
ನವದೆಹಲಿ(ಅ. 02): ಇದೇ ಅ. 7ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 3 ಟಿ20 ಪಂದ್ಯಗಳ ಸರಣಿಗಾಗಿ ಭಾರತ ತಂಡಕ್ಕೆ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮತ್ತೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಭಾನುವಾರ 5ನೇ ಏಕದಿನ ಪಂದ್ಯ ಮುಕ್ತಾಯವಾದ ಬಳಿಕ ಬಿಸಿಸಿಐ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಆರಂಭಿಕ ಆಟಗಾರ ಧವನ್ ವೈಯಕ್ತಿಕ ಕಾರಣಗಳಿಂದಾಗಿ ಆಸೀಸ್ ವಿರುದ್ಧದ ಏಕದಿನ ಸರಣಿಯಿಂದ ವಂಚಿತರಾಗಿದ್ದರು. ಇನ್ನು, 38 ವರ್ಷ ವಯಸ್ಸಿನ ಎಡಗೈ ವೇಗದ ಬೌಲರ್ ಆಶೀಶ್ ನೆಹ್ರಾ ಅವರಿಗೆ ಅವಕಾಶ ನೀಡಲಾಗಿದೆ. ಹಾಗೆಯೇ ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಅವರನ್ನು ಮತ್ತೆ ಟಿ20 ಸರಣಿಗೆ ಕೈಬಿಡಲಾಗಿದೆ. ಮಂದೀಪ್ ಸಿಂಗ್, ಯುವರಾಜ್ ಸಿಂಗ್, ರಿಶಭ್ ಪಂತ್, ಸುರೇಶ್ ರೈನಾ, ಅಮಿತ್ ಮಿಶ್ರಾ ಮತ್ತು ಪರ್ವೇಜ್ ರಸೂಲ್ ಅವರನ್ನು ತಂಡಕ್ಕೆ ಪರಿಗಣಿಸುವ ಬಗ್ಗೆ ಚರ್ಚಿಸಲಾಗಿತ್ತು. ಆದರೆ, ಅಂತಿಮವಾಗಿ ರಿಶಬ್ ಪಂತ್ ಬದಲಿಗೆ ದಿನೇಶ್ ಕಾರ್ತಿಕ್ ಅವರನ್ನು 2ನೇ ವಿಕೆಟ್ ಕೀಪರ್ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್ ಮತ್ತು ಅಕ್ಷರ್ ಪಟೇಲ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ, ಆರ್.ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಆ. 7ರಿಂದ 13ವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ರಾಂಚಿ, ಗುವಾಹಟಿ ಮತ್ತು ಹೈದರಾಬಾದ್'ನಲ್ಲಿ ಪಂದ್ಯಗಳು ನಡೆಯಲಿವೆ. ಏಕದಿನ ಕ್ರಿಕೆಟ್ ಸರಣಿಯನ್ನು 4-1ರಿಂದ ಜಯಿಸಿ ವಿಶ್ವದ ನಂ.1 ಪಟ್ಟಕ್ಕೇರಿರುವ ಭಾರತ ತಂಡ ಟಿ20 ಸರಣಿಯಲ್ಲೂ ಕಾಂಗರೂಗಳನ್ನು ಕಟ್ಟಿಹಾಕಲು ಸಜ್ಜಾಗಿದೆ.
ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್.ರಾಹುಲ್, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್'ಪ್ರೀತ್ ಬೂಮ್ರಾ, ಭುನವೇಶ್ವರ್ ಕುಮಾರ್, ಆಶೀಶ್ ನೆಹ್ರಾ, ಅಕ್ಷರ್ ಪಟೇಲ್.
epaperkannadaprabha.com