2023ರ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ಗೆ ಭಾರತ ಆತಿಥ್ಯ

ಭಾರತೀಯ ಬಾಕ್ಸಿಂಗ್ ಅಭಿಮಾನಿಗಳಿಗೆ ಗುಡ್ ನ್ಯೂಸ್
2023ರ ಮಹಿಳಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ಗೆ ಭಾರತ ಆತಿಥ್ಯ
2018ರಲ್ಲಿ ಕೊನೆಯ ಬಾರಿಗೆ ಭಾರತದಲ್ಲಿ ಈ ಟೂರ್ನಿ ಆಯೋಜನೆಗೊಂಡಿತ್ತು

India to host 2023 Womens World Boxing Championships kvn

ನವದೆಹಲಿ(ನ.09): ಭಾರತದ ಬಾಕ್ಸಿಂಗ್ ಇತಿಹಾಸದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಲಿದ್ದು, 2023ರ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ಗೆ ಭಾರತ ಆತಿಥ್ಯವನ್ನು ವಹಿಸಲಿದೆ. ಈ ವಿಚಾರವನ್ನು ಅಂತಾರಾಷ್ಟ್ರೀಯ ಬಾಕ್ಸಿಂಗ್ ಫೆಡರೇಷನ್ ಹಾಗೂ ಭಾರತೀಯ ಬಾಕ್ಸಿಂಗ್ ಫೆಡರೇಷನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವನ್ನು ಖಚಿತಪಡಿಸಿವೆ. ಪತ್ರಿಕಾಗೋಷ್ಠಿಯಲ್ಲಿ ಅಂತಾರಾಷ್ಟ್ರೀಯ ಬಾಕ್ಸಿಂಗ್ ಫೆಡರೇಷನ್ ಅಧ್ಯಕ್ಷ ಉಮರ್ ಕ್ರೆಮ್ಲೆವ್ ಹಾಗೂ ಭಾರತೀಯ ಬಾಕ್ಸಿಂಗ್ ಫಡೆರೇಷನ್ ಅಧ್ಯಕ್ಷ ಅಜಯ್ ಸಿಂಗ್ ಮತ್ತು ಭಾರತದ ತಾರಾ ಬಾಕ್ಸಿಂಗ್ ಪಟು ನಿಖಾತ್ ಜರೀನ್‌ ಉಪಸ್ಥಿತರಿದ್ದರು. ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮತ್ತೊಮ್ಮೆ ಅಂತಾರಾಷ್ಟ್ರೀಯ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟ ಜರುಗಲಿದೆ.

ಉಮರ್ ಕ್ರೆಮ್ಲೆವ್, ಅಂತಾರಾಷ್ಟ್ರೀಯ ಬಾಕ್ಸಿಂಗ್ ಫೆಡರೇಷನ್ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದರು. ಉಮರ್ ಕ್ರೆಮ್ಲೆವ್ 2020ರಲ್ಲಿ ಅಂತಾರಾಷ್ಟ್ರೀಯ ಬಾಕ್ಸಿಂಗ್ ಫೆಡರೇಷನ್ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಜಗತ್ತಿನಾದ್ಯಂತ ಬಾಕ್ಸಿಂಗ್ ಕ್ಷೇತ್ರ ಅಭಿವೃದ್ದಿಯಾಗುತ್ತಿರುವುದರಲ್ಲಿ ಉಮರ್ ಕ್ರೆಮ್ಲೆವ್ ಮಹತ್ತರ ಪಾತ್ರವನ್ನು ನಿಭಾಯಿಸುತ್ತಾ ಬಂದಿದ್ದಾರೆ.

ಇದು ಭಾರತಕ್ಕೆ ನನ್ನ ಮೊದಲ ಭೇಟಿಯಾಗಿದ್ದು, ಇಲ್ಲಿಯವರೆಗಿನ ನನ್ನ ಪಯಣ ಅದ್ಭುತವಾಗಿದೆ. ಭಾರತವು ಬಾಕ್ಸಿಂಗ್ ಕ್ರೀಡೆಯ ಬಗ್ಗೆ ಹೆಚ್ಚು ಒಲವು ಹೊಂದಿದೆ. ಹೀಗಾಗಿ ಇಲ್ಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಆಯೋಜಿಸುವುದರಿಂದ ಮತ್ತಷ್ಟು ಮಹಿಳೆಯರು ಬಾಕ್ಸಿಂಗ್‌ನತ್ತ ಒಲವು ತೋರಲು ಅನುಕೂಲವಾಗಲಿದೆ. ಭಾರತೀಯ ಬಾಕ್ಸಿಂಗ್ ಫೆಡರೇಷನ್, ಭಾರತದಲ್ಲಿ ಬಾಕ್ಸಿಂಗ್ ಬೆಳವಣಿಗೆ ಹೊಂದಲು ಸತತವಾಗಿ ಪ್ರಯತ್ನಿಸುತ್ತಿದೆ. ಭಾರತದಲ್ಲಿ ಸ್ಮರಣೀಯ ಟೂರ್ನಿ ಆಯೋಜನೆಗೊಳ್ಳುವ ವಿಶ್ವಾಸವಿದೆ ಎಂದು ಐಬಿಎ ಅಧ್ಯಕ್ಷ ಉಮರ್ ಕ್ರೆಮ್ಲೆವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಟೂರ್ನಿಯು ಸುಮಾರು 19.50 ಕೋಟಿ ರುಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ. ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಬಾಕ್ಸರ್‌ಗಳು ಸುಮಾರು 81 ಲಕ್ಷ ರುಪಾಯಿ ಬಹುಮಾನವನ್ನು ಪಡೆದುಕೊಳ್ಳಲಿದ್ದಾರೆ.

Biggest Taxpayer of Jharkhand: ಎಂಎಸ್‌ ಧೋನಿ ಕಟ್ಟಿರುವ ಮುಂಗಡ ತೆರಿಗೆ ಇಷ್ಟೊಂದಾ?

ಭಾರತದಲ್ಲಿ ಬಾಕ್ಸಿಂಗ್ ಬೆಳವಣಿಗೆ ಕಳೆದ ಕೆಲವರ್ಷಗಳಿಂದ ಗಣನೀಯ ಪ್ರಮಾಣದಲ್ಲಿ ಬೆಳವಣಿಗೆಯಾಗಿದೆ. ಇತ್ತೀಗಿನ ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವು ಬಾಕ್ಸಿಂಗ್ ಟೂರ್ನಿಯಲ್ಲಿ ಪದಕ ಪಟ್ಟಿಯಲ್ಲಿ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆಯುತ್ತಲೇ ಬಂದಿವೆ.  

ಭಾರತವು 2018ರಲ್ಲಿ ಕೊನೆಯ ಬಾರಿಗೆ ಅಂತಾರಾಷ್ಟ್ರೀಯ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಟೂರ್ನಿಯನ್ನು ಆಯೋಜಿಸಿತ್ತು. ನವದೆಹಲಿಯಲ್ಲಿ ನಡೆದಿದ್ದ ಆ ಟೂರ್ನಿಯಲ್ಲಿ ಭಾರತ 4 ಪದಕಗಳನ್ನು ತಮ್ಮದಾಗಿಸಿಕೊಂಡಿತ್ತು.

Latest Videos
Follow Us:
Download App:
  • android
  • ios